Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ದೇಶ

14-11 ಮತಗಳಿಂದ ವಕ್ಫ್ ಕರಡು ಮಸೂದೆಗೆ ಜೆಪಿಸಿ ಅಂಗೀಕಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 17 ವೀಕ್ಷಣೆಗಳು
waqf board jpc
waqf board jpc

ನವದೆಹಲಿ: ವಕ್ಫ್ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ವಕ್ಫ್ ಕರಡು ಮಸೂದೆಯನ್ನು ಸ್ವೀಕರಿಸಲಾಗಿದೆ.

ಮಸೂದೆಯ ಪರವಾಗಿ 14 ಹಾಗೂ ವಿರುದ್ಧ 11 ಮತಗಳು ಚಲಾವಣೆಯಾದವು. ಜೆಪಿಸಿಯ ವಿರೋಧ ಪಕ್ಷದ ಸದಸ್ಯರು ಇಂದು (ಜ.29) ಸಂಜೆ 4 ಗಂಟೆಯೊಳಗೆ ತಮ್ಮ ಭಿನ್ನಾಭಿಪ್ರಾಯಗಳನ್ನು ದಾಖಲಿಸಬಹುದಾಗಿತ್ತು.

ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸುತ್ತಿರುವ ಸಂಸತ್ತಿನ ಜಂಟಿ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್, ಸಮಿತಿಯ ಕರಡು ವರದಿ ಮತ್ತು ಪ್ರಸ್ತಾವಿತ ಕಾನೂನಿನ ತಿದ್ದುಪಡಿ ಆವೃತ್ತಿಯನ್ನು ಬುಧವಾರದ ಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಹೇಳಿದ್ದರು.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ಸದಸ್ಯರು ಪ್ರಸ್ತಾಪಿಸಿದ 14 ತಿದ್ದುಪಡಿಗಳೊಂದಿಗೆ ವಕ್ಫ್ ತಿದ್ದುಪಡಿ ಮಸೂದೆಯನ್ನು ಜೆಪಿಸಿ ಸೋಮವಾರ ಅಂಗೀಕರಿಸಿತ್ತು.

ವಿರೋಧ ಪಕ್ಷದ ಸಂಸದರು 44 ಬದಲಾವಣೆಗಳನ್ನು ಪ್ರಸ್ತಾಪಿಸಿದ್ದರು. ಆದರೆ, ಅವುಗಳನ್ನು ತಿರಸ್ಕರಿಸಲಾಯಿತು. ಇದು ರಾಜಕೀಯ ಪಕ್ಷಗಳ ಕೋಲಾಹಲಕ್ಕೆ ಕಾರಣವಾಗಿತ್ತು. ಪ್ರಸ್ತಾವಿತ ಬದಲಾವಣೆಗಳ ಮೇಲೆ ಇಂದು ಮತದಾನ ನಡೆಯಿತು.

ದೇಶಾದ್ಯಂತ ವಕ್ಫ್ ಮಂಡಳಿಗಳನ್ನು ನಿರ್ವಹಿಸುವ ವಿಧಾನದಲ್ಲಿ ಸುಧಾರಣೆಗಳನ್ನು ತರಲು ಉದ್ದೇಶಿಸಲಾದ ವಕ್ಫ್ ತಿದ್ದುಪಡಿ ಮಸೂದೆಯನ್ನು ಸೋಮವಾರ ಜೆಪಿಸಿ 16-10 ಸದಸ್ಯರ ಮತಗಳ ಅಂತರದಿಂದ (ಎನ್ ಡಿಎಯಿಂದ 16 ಮತ್ತು ವಿರೋಧ ಪಕ್ಷಗಳಿಂದ 10) ಅಂಗೀಕರಿಸಿತ್ತು.

ಪ್ರಸ್ತಾವಿತ ಮಸೂದೆಯಲ್ಲಿನ ಒಂದು ತಿದ್ದುಪಡಿಯು ಆಸ್ತಿಯು ವಕ್ಫ್ ಆಸ್ತಿಯೇ ಅಥವಾ ಅಲ್ಲವೇ ಎಂಬುದನ್ನು ನಿರ್ಧರಿಸಲು ಅಧಿಕಾರಿಯೊಬ್ಬರನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವ ಗುರಿ ಹೊಂದಿದೆ.

ಹಿಂದಿನ ಕಾನೂನಿನ ಪ್ರಕಾರ ಈ ಅಧಿಕಾರ ಜಿಲ್ಲಾಧಿಕಾರಿಗಳಿಗೆ ಇದೆ. 1995ರ ವಕ್ಫ್ ಕಾಯ್ದೆಯಲ್ಲಿ ಆಸ್ತಿಯ ಮಾಲೀಕತ್ವ ನಿರ್ಧರಿಸುವ ಅಧಿಕಾರವನ್ನು ಸರ್ವೇ ಆಯುಕ್ತರು ಮತ್ತು ಹೆಚ್ಚುವರಿ ಆಯುಕ್ತರಿಗೆ ನೀಡಲಾಗಿತ್ತು.
ಪ್ರಸ್ತುತ ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರನ್ನು ಸೇರಿಸುವುದನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯನ್ನೂ ಸಮಿತಿ ಅನುಮೋದಿಸಿದೆ.

ತಿದ್ದುಪಡಿ ಮಸೂದೆಯಲ್ಲಿ ’ಕಡ್ಡಾಯ’ ಎಂಬ ಪದವನ್ನು ಕೈಬಿಡಲಾಗಿದ್ದು, ಓರ್ವ ವಿದ್ವಾಂಸ ಸೇರಿದಂತೆ ಮಂಡಳಿಯ ಸದಸ್ಯರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ.

ವರದಿಗಳ ಪ್ರಕಾರ, ವಕ್ಫ್ ಮಸೂದೆಯಲ್ಲಿ ಒಟ್ಟು 66 ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ. ಇದರಲ್ಲಿ ಆಡಳಿತಾರೂಢ ಬಿಜೆಪಿ ಸಂಸದರು 23 ಮತ್ತು ವಿರೋಧ ಪಕ್ಷದ ಸಂಸದರು ೪೪ ಬದಲಾವಣೆಗಳನ್ನು ಪ್ರಸ್ತಾಪಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment