ಬಾಲಿವುಡ್ ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೆವಾಲಾಗೆ ಚುನಾವಣಾ ಪ್ರಚಾರದಿಂದ 2 ದಿನಗಳ ಕಾಲ ನಿರ್ಬಂಧ ವಿಧಿಸಲಾಗಿದೆ.
ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೇಮಮಾಲಿನಿ ವಿರುದ್ಧ ಸೆಕ್ಸಿ ಹೇಳಿಕೆ ನೀಡಿದ್ದಕಾಗಿ ಕೇಂದ್ರ ಚುನಾವಣಾ ಆಯೋಗ 2 ದಿನಗಳ ಕಾಲ ಪ್ರಚಾರದಿಂದ ನಿರ್ಬಂಧ ವಿಧಿಸಿದೆ.
ಮಂಗಳವಾರ ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಚುನಾವಣಾ ಪ್ರಚಾರದಿಂದ ದೂರ ಉಳಿಯುವಂತೆ ಸೂಚಿಸಿರುವ ಕೇಂದ್ರ ಚುನಾವಣಾ ಆಯೋಗ ವಿವಾದಕ್ಕೆ ಸಂಬಂಧಿಸಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.