ಮಾಜಿ ಗ್ರಾಮ ಪಂಚಾಯತಿ ಸದಸ್ಯನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಭೀಕರ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ವಾಗ್ದಾರಿ ರಸ್ತೆಯ ಖಾನಾಪುರ ಬಳಿ ನಡೆದಿದೆ.
ವಿಶ್ವನಾಥ್ ಜಮಾದಾರ (50) ಕೊಲೆಯಾದ ಮಾಜಿ ಗ್ರಾಂ ಸದಸ್ಯ.
ಪಡುಸಾವಳಿಯಿಂದ ಆಳಂದ ಪಟ್ಟಣಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವಿಶ್ವನಾಥದ ಜಮಾದಾರ್ ಅವರನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ದುಷ್ಕರ್ಮಿಗಳು ಮೂರು ಬಾರಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಕಲಬುರಗಿ ಎಸ್ ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.