ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಗಾಬರೆ ಲೇಔಟ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ದಂಪತಿಯನ್ನು ಶೃತಿ (35), ಮಕ್ಕಳಾಸ ಮುನಿಶ್ (9), ಮೂರು ತಿಂಗಳ ಮಗು ಅನಿಶ್ ನನ್ನು ಕೊಂದು ಪತಿ ಸಂತೋಷ್ ಕೊರಳ್ಳಿ (45) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪತ್ನಿ ಹಾಗೂ ಮಕ್ಕಳನ್ನು ಮೊದಲು ಕೊಲೆ ಮಾಡಿ, ನಂತರ ಸಂತೋಷ್ ಮನೆಯಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ.
ಗಂಡ-ಹೆಂಡತಿ ಮಧ್ಯೆ ಆಗಾಗ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಇದರಿಂದ ಬೇಸತ್ತ ಸಂತೋಷ್ ಕೊರಳ್ಳಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



