Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಅರ್ಜಿ ಆಹ್ವಾನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
kannada pustaka pradhikara

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000-00ಗಳ ಪ್ರೋತ್ಸಾಹಧನ ನೀಡಲಾಗುವುದು.

ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ.ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ / ಸ್ನಾತಕೋತ್ತರ ಪದವಿ(PHD)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ / ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳೊಂದಿಗಿನ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ್ದರಿಂದ ತಮ್ಮ  ಮೂಲ ಹಸ್ತಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವುದು.

ಅರ್ಜಿಗಳೊಂದಿಗೆ ಹಸ್ತಪ್ರತಿ ಸಲ್ಲಿಸಲು ಕೊನೆಯ ದಿನಾಂಕ:24.12.2025ರಂದು ಸಂಜೆ 5.30ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 – ಅವರಿಗೆ ಅರ್ಜಿ ನಮೂನೆಯೊಂದಿಗೆ ಡಿ.ಟಿ.ಪಿ. ಮಾಡಿದ ಹಸ್ತಪ್ರತಿಯನ್ನು  ಕಳುಹಿಸಿಕೊಡಲು ಕೋರಿದೆ.

ಅರ್ಜಿ ನಮೂನೆಯನ್ನು ಪಡೆಯಲು / ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002.

– ವೆಬ್ಸೈಟ್www.kannadapustakapradhikara.com, ದೂರವಾಣಿಸಂಖ್ಯೆ: 080-22484516 / 22107704 – ಇಲ್ಲಿ ಸಂಪರ್ಕಿಸಬಹುದಾಗಿದೆ.

ದಯವಿಟ್ಟು ಮೇಲಿನ ವಿಷಯವನ್ನು ತಮ್ಮ ಪತ್ರಿಕೆ/ಮಾಧ್ಯಮದಲ್ಲಿ ರಾಜ್ಯ ಮಟ್ಟದ ಸುದ್ಧಿಯಾಗಿ ಪ್ರಕಟಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ವಿನಂತಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment