ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿಯ ಮರು ಸಮೀಕ್ಷೆ ಕುರಿತು ಚರ್ಚೆ ನಡೆಸಿ ತೀರ್ಮಾನಿಸಲಾಗಿದೆ ಎಂದರು.



