Thursday, May 14, 2026
Google search engine
Homeರಾಜ್ಯಸ್ಥಳೀಯ ಸಂಸ್ಥೆ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಬಳಕೆಗೆ ರಾಜ್ಯ ಸಚಿವ ಸಂಪುಟ ನಿರ್ಧಾರ

ಸ್ಥಳೀಯ ಸಂಸ್ಥೆ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಬಳಕೆಗೆ ರಾಜ್ಯ ಸಚಿವ ಸಂಪುಟ ನಿರ್ಧಾರ

ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೇಟ್‌ ಪೇಪರ್‌ ಬಳಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಚುನಾವಣೆಗಳಿಗೆ ಮತದಾರರ ಪಟ್ಟಿ ತಯಾರಿಸಲು ಪರಿಷ್ಕರಣೆ ಮಾಡಲು ಅಗತ್ಯ ಕಾನೂನನ್ನು ಮಾಡಲು
ನಿಯಮಗಳನ್ನು ಬದಲಾವಣೆ ಮಾಡಲು ಸಂಪುಟ ನಿರ್ಧರಿಸಿತು.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಎಚ್.ಕೆ. ಪಾಟೀಲ್‌, ಇತ್ತೀಚೆಗೆ ಅಕ್ರಮವಾಗಿ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಿದ್ದಾರೆಂಬ ಆರೋಪ ಹಲವು ರಾಜ್ಯಗಳಲ್ಲಿ ಕೇಳಿ ಬರುತ್ತಿದೆ.

ಇವಿಎಂಗಳ ಬಗ್ಗೆಯೂ ವಿಶ್ವಾಸಾರ್ಹತೆ ಕಡಿಮೆ ಆಗುತ್ತಿದೆ. ಜನರ ಮನಸ್ಥಿತಿಯ ಆಧಾರದ ಮೇಲೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೇಟ್‌ ಪೇಪರ್‌ ಬಳಸಲು ತೀರ್ಮಾನಿಸಲಾಗಿದೆ ಎಂದರು.
ಕೊಪ್ಪಳ, ಬಾದಾಮಿಯಲ್ಲಿ ಕಾಂಗ್ರೆಸ್‌ ಭವನ ನಿರ್ಮಾಣಕ್ಕೆ ಭೂಮಿ ಹಂಚಿಕೆ

ಕೊಪ್ಪಳದಲ್ಲಿ ಕಾಂಗ್ರೆಸ್‌ ಭವನ ನಿರ್ಮಾಣ ಮಾಡಲು ಭೂಮಿಯನ್ನು ಗುತ್ತಿಗೆ ಆಧಾರ ಮಾಡಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

ಕೊಪ್ಪಳದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ 12.28 ಎಕರೆ ಭೂಮಿಯನ್ನು 30 ವರ್ಷ ಗುತ್ತಿಗೆ ನೀಡುವುದು ಹಾಗೂ ಬಾದಾಮಿಯಲ್ಲಿ ಕಾಂಗ್ರೆಸ್‌ ಭವನ ನಿರ್ಮಾಣ ಮಾಡಲು ನಗರ ಪ್ರಾಧಿಕಾರ ಅಧೀನದಲ್ಲಿ 613 ಚ.ಮೀ ಭೂಮಿ ನೀಡಲು ವಿನಾಯಿತಿ ನೀಡಲು ಸಂಪುಟ ಒಪ್ಪಿಗೆ ನೀಡಿತು.

ಮುದೋಳ ಕುಡಿಯುವ ನೀರಿನ ಯೋಜನೆಗೆ 21 ಕೋಟಿ ಅನುದಾನ ನೀಡುವುದು, ಅಲಗಾ ಗ್ರಾಮದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡಲು 6.73 ಕೋಟಿ ಯೋಜನಾ ವೆಚ್ಚಕ್ಕೆ ಒಪ್ಪಿಗೆ ನೀಡಲಾಗಿದ್ದು,
ಸಿಂಧಗಿ, ಸವದತ್ತಿ, ಹುಮ್ನಬಾದ್ ಪುರಸಭೆಗಳನ್ನು ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದೆ.

ಅಲ್ಪ ಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 390 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದ್ದು, ಕೆಆರ್ ಸರ್ಕಲ್ ಬಳಿ 919 ಚದರ ಮೀಟರ್ ವಿಸ್ತೀರ್ಣದಲ್ಲಿ 27 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ಧಾರ್ಮಿಕ ಸೌಧ ನಿರ್ಮಿಸಲು ನಿರ್ಧರಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments