Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ರಾಜ್ಯ

ಕಾಳಸಂತೆಯಲ್ಲಿ ರಸಗೊಬ್ಬರ ಮಾರುವವರ ವಿರುದ್ಧ ಕ್ರಮ ಕೈಗೊಳ್ಳಿ: ಪೊಲೀಸ್ ಮಹಾನಿರ್ದೇಶಕರಿಗೆ ಸಿಎಂ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 23 ವೀಕ್ಷಣೆಗಳು
karnataka cm siddaramiah
karnataka cm siddaramiah

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ನಡುವೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟ ಸೂಚನೆ ನೀಡಿದ್ದಾರೆ.

ಜಿಲ್ಲೆ ಮತ್ತು ತಾಲ್ಲೂಕು, ಹೋಬಳಿ ಎಲ್ಲೂ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಠಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಡು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment