Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ರಾಜ್ಯ

ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ರಾಜ್ಯ ಸರ್ಕಾರ ಆದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 28 ವೀಕ್ಷಣೆಗಳು
egg banana
egg banana

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಇಲಾಖೆಯವರು ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಕುರಿತು ಪ್ರತ್ಯೇಕವಾದ ಮಾರ್ಗಸೂಚಿಯನ್ನು ಹೊರಡಿಸಲು ಸೂಚಿಸಲಾಗಿದೆ.

2023-24ನೇ ಸಾಲಿನ ಜುಲೈ ಬಜೆಟ್​​ನಲ್ಲಿ ಘೋಷಣೆ ಮಾಡಿರುವಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಪ್ರತಿ ವಿದ್ಯಾರ್ಥಿಯ ಒಂದು ದಿನದ ಘಟಕ ವೆಚ್ಚ 6 ರೂ.ನಂತೆ) 80 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ/ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಆದೇಶಿಸಲಾಗಿತ್ತು.

ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರದ ಹೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಬ್ಯಾಂಕ್ ಖಾತೆಗಳನ್ನು ತೆರೆಯಲು ಆದೇಶಿಸಲಾಗಿತ್ತು.

ಕಲಬುರಗಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಬರೆದ ಪತ್ರದಲ್ಲಿ, ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೇಂಗಾ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎನ್ನಬಹುದಾದಂತಹ ಅಪರ್ಯಾಪ್ತ ಕೊಬ್ಬಿನಾಂಶ ಹೆಚ್ಚಿಗೆ ಇದೆ. ಇದರಲ್ಲಿನ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಈ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸುವ ಕುರಿತು ಕ್ರಮ ವಹಿಸಬೇಕು ಎಂದು ಕೋರಿದ್ದರು

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment