ಗ್ರೇಟರ್ ಬೆಂಗಳೂರು ಯೋಜನೆಯಡಿ ಬಿಬಿಎಂಪಿಯನ್ನು 5 ವಿಭಾಗಗಳಾಗಿ ವಿಂಗಡಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಗ್ರೇಟರ್ ಬೆಂಗಳೂರು ಯೋಜನೆ ಜಾರಿಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಶನಿವಾರ 5 ವಿಭಾಗಗಳಾಗಿ ಗಡಿ ವಿಂಗಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಆಗಸ್ಟ್ 10ರೊಳಗೆ ಬಿಬಿಎ ಆಗಿ ಪರಿವರ್ತಿಸುವ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ಶನಿವಾರ ಈ ಆದೇಶ ಹೊರಡಿಸಿದೆ ಎಂದು ಹೇಳಲಾಗಿದೆ.
ಗ್ರೇಟರ್ ಬೆಂಗಳೂರು ಯೋಜನೆಯಡಿ 5 ವಿಭಾಗಗಳನ್ನು ವಿಂಗಡಿಸಲಾಗಿದ್ದು, ಇದರ ಗಡಿ ಗುರುತು ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ.



