Sunday, October 4, 2026
Google search engine
Homeಮನರಂಜನೆಕನ್ನಡ ಸಿನಿಮಾಗಾಗಿ ಓಟಿಟಿ ಆರಂಭಿಸಲು 10 ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ!

ಕನ್ನಡ ಸಿನಿಮಾಗಾಗಿ ಓಟಿಟಿ ಆರಂಭಿಸಲು 10 ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ!

ಕನ್ನಡ ಚಿತ್ರಗಳನ್ನು ಓಟಿಟಿಗಳು ಸ್ವೀಕರಿಸಲು ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಚಿತ್ರಗಳಿಗೆ ಒಟಿಟಿ ವೇದಿಕೆ ರೂಪಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ಕುರಿತು ವರದಿ ನೀಡಲು ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಕನ್ನಡ ಚಲನಚಿತ್ರಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ OTT ವೇದಿಕೆ ರೂಪಿಸಲು ಮುಂದಾಗಿದ್ದು, ಇದಕ್ಕೆ ಅಗತ್ಯವಾದ ರೂಪುರೇಷೆಗಳನ್ನು ರೂಪಿಸಲು ಅಗತ್ಯ ಮಾಹಿತಿ ಸಂಗ್ರಹಿಸಿ ವರದಿಯನ್ನು ಸಿದ್ಧಪಡಿಸಲು ತಜ್ಞರು/ತಾಂತ್ರಿಕ ಪರಿಣಿತರನ್ನೊಳಗೊಂಡ ಸಮಿತಿಯನ್ನು ರಚಿಸಲು ಆದೇಶಿಸಿದೆ.

ಬಜೆಟ್ ಘೋಷಣೆಯ ಅನ್ವಯ ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆ ನಿರ್ಮಿಸುವ ಉದ್ದೇಶದಿಂದ 10 ಮಂದಿ ಸದಸ್ಯರ ತಜ್ಞರ ನಿಯೋಗವನ್ನು ವಾರ್ತಾ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ನಿಯೋಗ ರಚಿಸಲಾಗಿದೆ.

ನಿಯೋಗದಲ್ಲಿ ಸದಸ್ಯರಾಗಿ ಶ್ರೀ ಕಂಠೀರವ ಸ್ಟುಡಿಯೋ ಲಿ. ಅಧ್ಯಕ್ಷ ಮಹಬೂಬ್ ಪಾಷಾ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಚಲನಚಿತ್ರ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ರಾಕ್‌ಲೈನ್ ವೆಂಕಟೇಶ್, ನಟ ದುನಿಯಾ ವಿಜಯ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಐವಾನ್ ಡಿಸಿಲ್ವ, ದೇಶಾದ್ರಿ ಹೆಚ್ ಇರಲಿದ್ದಾರೆ.

ಕರಡು ನೀತಿ ರೂಪಿಸಲು ಸಮಿತಿ ರಚನೆ: ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯಗಳಲ್ಲಿ ಚಿತ್ರೋದ್ಯಮಕ್ಕೆ ಸಂಬಂಧಿಸಿದಂತೆ ಪಾಲಿಸುತ್ತಿರುವ ನೀತಿಗಳನ್ನು ಅಭ್ಯಸಿಸಿ, ಕನ್ನಡ ಚಲನಚಿತ್ರೋದ್ಯಮದ ವಿವಿಧ ಕ್ಷೇತ್ರಗಳ ಪರಿಣಿತರೊಂದಿಗೆ ಚರ್ಚಿಸಿ ವಿವರವಾದ ಅಧ್ಯಯನ ನಡೆಸಿ, ಸಿನಿಮಾ ಕ್ಷೇತ್ರವನ್ನು ಉದ್ಯಮವಾಗಿ ಪರಿಗಣಿಸಿ ಕೈಗಾರಿಕಾ ನೀತಿಯಡಿ ನೀಡಲಾಗುತ್ತಿರುವ ಸೌಲಭ್ಯಗಳನ್ನು ವಿಸ್ತರಿಸಲು ಸೂಕ್ತ ಕರಡು ನೀತಿಯನ್ನು ರೂಪಿಸಿ ಸರ್ಕಾರಕ್ಕೆ ಸಲ್ಲಿಸಲು ಸಮಿತಿಯನ್ನು ರಚಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಚಲನಚಿತ್ರ ಭಂಡಾರ ಸ್ಥಾಪನೆ ಸಂಬಂಧ ನಿಯೋಗ: ಅದೇ ರೀತಿ ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಮತ್ತು ನಾನ್ ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು ಚಲನಚಿತ್ರ ಭಂಡಾರದ ಸ್ಥಾಪನೆ ಕುರಿತಾದ ವಿಷಯದ ಬಗ್ಗೆ ಪೂರಕ ಅಧ್ಯಯನ ನಡೆಸಿ ಮಾಹಿತಿ ಸಂಗ್ರಹಿಸಿ ವರದಿಯನ್ನು ಸಿದ್ಧಪಡಿಸಲು ತಜ್ಞರು/ತಾಂತ್ರಿಕ ಪರಿಣಿತರನ್ನೊಳಗೊಂಡ ನಿಯೋಗವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಆದೇಶಿಸಲಾಗಿದೆ. ಈ ನಿಯೋಗಕ್ಕೆ ವಾರ್ತಾ ಇಲಾಖೆ ಆಯುಕ್ತರು ಅಧ್ಯಕ್ಷರಾಗಿರಲಿದ್ದಾರೆ. ಒಟ್ಟು 10 ಸದಸ್ಯರು ನಿಯೋಗದಲ್ಲಿ ಇರಲಿದ್ದಾರೆ.

ಬಜೆಟ್​ನಲ್ಲಿ ಘೋಷಿಸಿದ್ದ ಸಿಎಂ: ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಸೌಲಭ್ಯ ಒದಗಿಸುವುದಾಗಿ ಬಜೆಟ್​ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜೊತೆಗೆ 500 ಕೋಟಿ ವೆಚ್ಚದಲ್ಲಿ ಚಿತ್ರನಗರಿ ಹಾಗೂ 3 ಕೋಟಿ ವೆಚ್ಚದಲ್ಲಿ ಚಲನಚಿತ್ರ ಭಂಡಾರ ಸ್ಥಾಪನೆ ಮಾಡುವುದಾಗಿ ಸಿಎಂ ಪ್ರಕಟಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments