Thursday, November 21, 2024
Google search engine
Homeತಂತ್ರಜ್ಞಾನ5,765 ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಕರ್ನಾಟಕ ದೇಶದಲ್ಲೇ ನಂ.1: ವರದಿ

5,765 ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಕರ್ನಾಟಕ ದೇಶದಲ್ಲೇ ನಂ.1: ವರದಿ

ಬೆಂಗಳೂರು: ಎಲೆಕ್ಟ್ರಿಕ್‌ ವಾಹನಗಳ ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೇಂದ್ರ ಇಂಧನ ಸಚಿವಾಲಯದ ಬ್ಯೂರೋ ಆಫ್‌ ಎನರ್ಜಿ ಎಫಿಷಿಯನ್ಸಿ ಬಿಡುಗಡೆ ಮಾಡಿರುವ ವರದಿ ಪ್ರಕಾರ, ರಾಜ್ಯದಲ್ಲಿ ಒಟ್ಟು 5,765 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರ್ಕಾರದ  ಬದ್ಧತೆಗೆ ಇದು ಸಾಕ್ಷಿಯಾಗಿದೆ.

ಎಲೆಕ್ಟ್ರಿಕ್ ವಾಹನ ವಲಯದಲ್ಲಿ ಒಂದು ಹೆಜ್ಜೆ ಸದಾ ಮುಂದಿರುವ ಕರ್ನಾಟಕ, 2017ರಲ್ಲಿ ಇವಿ ನೀತಿಯನ್ನು ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿದೆ. 2021ರಲ್ಲಿ ಹೆಚ್ಚುವರಿ ಪ್ರೋತ್ಸಾಹದೊಂದಿಗೆ ಈ ನೀತಿಯನ್ನು ಪರಿಷ್ಕರಿಸಲಾಯಿತು. ಇದಲ್ಲದೇ, ಎಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಗಣನೀಯವಾಗಿ ಹೆಚ್ಚಿಸುವ ಕಾರ್ಯತಂತ್ರದ ಕ್ರಮವಾಗಿ ಸರ್ಕಾರವು ರಾಜ್ಯಾದ್ಯಂತ ಮಾದರಿ ಇವಿ ನಗರಗಳನ್ನು ಅಭಿವೃದ್ಧಿಪಡಿಸಲು ಸಜ್ಜಾಗಿದೆ.

ವರದಿಯ ಪ್ರಕಾರ, ಇವಿ ಚಾರ್ಜಿಂಗ್ ಸ್ಟೇಷನ್ ವಿಚಾರದಲ್ಲಿ ಬೆಂಗಳೂರು ನಗರವು ಮುಂಚೂಣಿಯಲ್ಲಿದ್ದು, ನಗರ ಜಿಲ್ಲೆಯಲ್ಲಿ  4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಇದು ರಾಜ್ಯದ ಒಟ್ಟಾರೆ ಇವಿ ಚಾರ್ಜಿಂಗ್‌ ಸ್ಟೇಷನ್‌ಗಳ ಪೈಕಿ ಶೇ. 85ರಷ್ಟು.

5,765 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿರುವ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ, 3,728 ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ- 1,989 ಮತ್ತು ದಿಲ್ಲಿ-  1,941 ಚಾರ್ಜಿಂಗ್ ಸ್ಟೇಷನ್ ಗಳೊಂದಿಗೆ ನಂತರದ ಸ್ಥಾನದಲ್ಲಿವೆ.  ತಮಿಳುನಾಡಿನಲ್ಲಿ 1,413, ಕೇರಳ- 1,212 ಮತ್ತು ರಾಜಸ್ಥಾನ- 1,129, ಗುಜರಾತ್- 992, ತೆಲಂಗಾಣ- 956, ಪಶ್ಚಿಮ ಬಂಗಾಳ- 763, ಹರಿಯಾಣ- 709, ಮತ್ತು ಆಂಧ್ರಪ್ರದೇಶ 601 ಸ್ಟ್ರೇಷನ್‌ಗಳನ್ನು ಹೊಂದಿವೆ.

ಇವಿ ಚಾರ್ಜಿಂಗ್ ಸ್ಟೇಷನ್‌ಗಳಿಗೆ ವಿವಿಧ ಮೂಲಗಳಿಂದ ಆರ್ಥಿಕ ಬೆಂಬಲ ದೊರೆತಿದ್ದು, ಇವುಗಳಲ್ಲಿ ಕೇಂದ್ರ ಸರ್ಕಾರದ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವೆಹಿಕಲ್ಸ್ (FAME) ಯೋಜನೆ, ಬೆಸ್ಕಾಂನ  ಹೂಡಿಕೆ, ರಾಜ್ಯ ಸಾರಿಗೆ ಇಲಾಖೆಯಿಂದ ಹಸಿರು ಸೆಸ್ ನಿಧಿ ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಹೂಡಿಕೆಗಳು ಸೇರಿವೆ.

ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ  2024ರ ರಾಜ್ಯ ಬಜೆಟ್‌ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರಾಜ್ಯಾದ್ಯಂತ ಸುಮಾರು 2,500 ಹೊಸ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇದೆ. ಇದಲ್ಲದೇ, ವಿದ್ಯುತ್ ಸರಬರಾಜು ಕಂಪನಿಗಳ ಸಹಯೋಗದೊಂದಿಗೆ 100 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರವು  35 ಕೋಟಿ ರೂ. ಹೂಡಿಕೆ ಮಾಡಲು ಯೋಜಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments