ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ 2 ವಾರಗಳ ಕಾಲ ಮುಂದೂಡಿದೆ.
ತೆರಿಗೆ ಪಾಲಿನ ಹಕ್ಕನ್ನು ಮಂಡಿಸಿ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ವಿಚಾರಣೆಯನ್ನು ಮುಂದೂಡಿದೆ.
ಕರ್ನಾಟಕದ ಪರ ಹಿರಿಯ ವಕೀಲ ಕಪಿಲ್ ಸಿಬಾಲ್ ವಾದ ಮಂಡಿಸಿದ್ದು, ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂಕೋರ್ಟ್ ಈ ಬಗ್ಗೆ ಉತ್ತರ ನೀಡುವಂತೆ ಸೂಚಿಸಿದೆ.