Wednesday, November 12, 2025
Google search engine
Homeರಾಜ್ಯರಾಜ್ಯದ ಬಹುಮಹಡಿ ಕಟ್ಟಡಗಳ ಮೇಲೆ ಶೇ.1ರಷ್ಟು ಸೆಸ್ ಹೇರಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ

ರಾಜ್ಯದ ಬಹುಮಹಡಿ ಕಟ್ಟಡಗಳ ಮೇಲೆ ಶೇ.1ರಷ್ಟು ಸೆಸ್ ಹೇರಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು: ಅಗ್ನಿಶಾಮಕ ದಳದ ಕಾಯ್ದೆ ಅನ್ವಯ ರಾಜ್ಯದ ಎಲ್ಲ ಬಹುಮಹಡಿಗಳಿಗೆ ಶೇ.1ರಷ್ಟು ಸೆಸ್ ವಿಧಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ವಾಣಿಜ್ಯ ಕಟ್ಟಡಗಳು, ಕೈಗಾರಿಕಾ ಸಂಕೀರ್ಣಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು, ಅಪಾರ್ಟ್ ಮೆಂಟ್ ಗಳು ಸೇರಿ ಬಹುಮಹಡಿ ಕಟ್ಟಡಗಳ ಮೇಲೆ ಶೇ.1ರಷ್ಟು  ಸೆಸ್ ವಿಧಿಸಲು ನಿರ್ಧರಿಸಲಾಗಿದೆ.

ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಳಿಗೆ ಮಾತ್ರ ಇದು ಅನ್ವಯ ಆಗಲಿದೆ ಎಂದು ಸಭೆಯ ನಂತರ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಸಭೆಯಲ್ಲಿ ಬೆಂಗಳೂರಿನ ಸ್ಪೇಸ್ ಟೆಕ್ ನಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ. ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕವನ್ನು 50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ಕೊಟ್ಟಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸುವ ಜೊತೆಗೆ ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ಕ್ರಿಮಿನಲ್ ಕೇಸ್‌ಗೆ ಅಧಿಕೃತ ಒಪ್ಪಿಗೆ ನೀಡಲಾಗಿದೆ. ನ್ಯಾಯಮೂರ್ತಿ ಕುನ್ಹಾ ವರದಿ ಶಿಫಾರಸು ಜಾರಿಗೆ ಸಂಪುಟ ಒಪ್ಪಿಗೆ ನೀಡಿದ್ದು, ಡಿಎನ್‌ಎ ಈವೆಂಟ್‌ ಮ್ಯಾನೆಜ್‌ಮೆಂಟ್‌ ಸಂಸ್ಥೆ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲಿಸಲು ನಿರ್ಧರಿಸಿದೆ.

ಜೀವಾವಧಿ ಶಿಕ್ಷೆಯಾಗಿರುವ ಕೈದಿಗಳಿಗೆ ಸನ್ನಡತೆ ಆಧಾರದಲ್ಲಿ ಬಿಡುಗಡೆ ಕಲ್ಪಿಸಲು ಒಪ್ಪಿಗೆ ನೀಡಲಾಗಿದೆ. ರಾಜ್ಯದ ನಾನಾ ಕೇಂದ್ರ ಕಾರಾಗೃಹಗಳಲ್ಲಿರುವ 46 ಜೀವಾವಧಿ ಕೈದಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments