Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಲಕ್ಕುಂಡಿ ಗ್ರಾಮದ 16 ತಾಣ ಸಂರಕ್ಷಿತ ಸ್ಮಾರಕಗಳಾಗಿ ಘೋಷಣೆ: ಸಚಿವ ಎಚ್.ಕೆ. ಪಾಟೀಲ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 34 ವೀಕ್ಷಣೆಗಳು
hk patil

ಗದಗ : ಐತಿಹಾಸಿಕ ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಇನ್ನು 8 ದೇವಸ್ಥಾನ ಭಾವಿಗಳನ್ನು ಫೆಬ್ರವರಿ ಅಂತ್ಯದೊಳಗೆ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಸರ್ಕಾರ ದಿಂದ ಘೋಷಣೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಭಾನುವಾರ (ಜ.18) ದಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಉನ್ನತ ಮಟ್ಟದ ಸಲಹಾ ಸಮಿತಿಯ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ಇದಲ್ಲದೇ, ಲಕ್ಕುಂಡಿಯ ಇನ್ನು 20 ದೇವಸ್ಥಾನ, ಬಾವಿಗಳನ್ನು ರಾಜ್ಯ ಸಂರಕ್ಷಿತ ಸ್ಮಾರಕಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಸಂಬಂಧ ಒಂದು ತಿಂಗಳ ಒಳಗಾಗಿ ಸಮಗ್ರ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಲಾಗಿದೆ. ಇದರಿಂದಾಗಿ ಲಕ್ಕುಂಡಿಯ ಒಟ್ಟು 44 ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿದ್ದು, ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದರು.

ಲಕ್ಕುಂಡಿಯ ಆಯ್ದ 5 ದೇವಸ್ಥಾನಗಳು ಮತ್ತು 1 ಪ್ರಾಚೀನ ಬಾವಿಯ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫೆಬ್ರವರಿ ತಿಂಗಳಲ್ಲಿ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿ ಕೆಲಸ ಆರಂಭಿಸಲಾಗುವುದು ಎಂದರು.

ಅಲ್ಲದೆ, ಮಣ್ಣಿನಡಿಯಲ್ಲಿ ಸ್ಪಷ್ಟವಾಗಿ ಕಾಣದ ದೇವಸ್ಥಾನಗಳನ್ನು ಗುರುತಿಸಿ ಮಾರ್ಚ್ ಒಳಗೆ ಮರುಜೀವ ನೀಡಲು ವಿಶೇಷ ಉತ್ಖನನ ನಡೆಸಲಾಗುವುದು. ಅದಕ್ಕೆ ಜನರ ಸಹಕಾರ ಅಗತ್ಯವಿದ್ದು, ಕೆಲವರಿಗೆ ಪರಿಹಾರ ಕೊಟ್ಟು, ಇಲ್ಲವೇ ಮನವೊಲಿಸಿ ಐತಿಹಾಸಿಕ ತಾಣಗಳನ್ನು ಸರಕಾರಕ್ಕೆ ಕೊಡಬೇಕು ಎಂದು ಜನರಲ್ಲಿ ವಿನಂತಿ ಮಾಡಿಕೊಳ್ಳುವೆ ಎಂದರು.

165 ಲಕ್ಷ ರೂ. ಬಿಡುಗಡೆ
ಲಕ್ಕುಂಡಿಯ ಕಲಾ ವೈಭವವನ್ನು ಅಧ್ಯಯನ ಮಾಡಲು ಬಯಲು ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ 165 ಲಕ್ಷ ರೂ. ಬಿಡುಗಡೆಯಾಗಿದೆ. ಗಣರಾಜ್ಯೋತ್ಸವದ ಒಳಗೆ ಜಮೀನು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ, ಟೆಂಡರ್ ಕರೆಯಲು ಸೂಚಿಸಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಸಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.

ಇತ್ತೀಚೆಗೆ ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿಯನ್ನು ಪ್ರಾಮಾಣಿಕವಾಗಿ ಸರಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಅವರಿಗೆ ಸರ್ಕಾರದಿಂದ ಉದ್ಯೋಗ ಮತ್ತು ಮನೆ ನೀಡುವ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತಾದ ಅಧಿಕೃತ ಆದೇಶದ ಪತ್ರಗಳನ್ನು ಗಣರಾಜ್ಯೋತ್ಸವದಂದೇ ಹಸ್ತಾಂತರಿಸಲಾಗುವುದು.

ಅಲ್ಲದೇ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ, ಇದೊಂದು ವಿಶೇಷ ಪ್ರಕರಣ ಎಂದು ಭಾವಿಸಿ, ನಿಧಿಯ ಕಾಲಘಟ್ಟವನ್ನು ನಿರ್ಣಯಿಸಿ ಪ್ರೋತ್ಸಾಹ ಧನ ನೀಡಲಾಗುವುದು. ಸಿಕ್ಕಿರುವ ನಿಧಿಯ ಕಾಲಘಟ್ಟವನ್ನು ನಿರ್ಧರಿಸಲು ತಾಂತ್ರಿಕ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ. ಅದರ ಸೂಚನೆ ಮೇರೆಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಚಿವ ಎಚ್ ಕೆ ಪಾಟೀಲ ತಿಳಿಸಿದರು.

ಈ ವೇಳೆ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಲಹಾ ಸಮಿತಿಯ ಸದಸ್ಯ ಸಿದ್ದು ಪಾಟೀಲ, ಅ ದ ಕಟ್ಟಿಮನಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಪುರಾತತ್ವ ಇಲಾಖೆ ಆಯುಕ್ತ ದೇವರಾಜ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಡಾ. ಶರಣು‌ ಗೊಗೇರಿ, ಲಕ್ಕುಂಡಿ ಗ್ರಾ ಪಂ ಅಧ್ಯಕ್ಷ ಕೆಂಚಪ್ಪ ಪೂಜಾರ, ಅಧಿಕಾರಿಗಳಾದ ಗಂಗಪ್ಪ ಎಂ, ವಸಂತ ಮಡ್ಲೂರ, ಕೊಟ್ರೇಶ್ ವಿಭೂತಿ, ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ತೇಜಶ್ವರ, ಮಲ್ಲಯ್ಯ ಕೆ, ಅಮೀರ್ ನಾಯ್ಕ, ಸೇರಿದಂತೆ ಇತರರು ಇದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment