Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ರಾಜ್ಯ

ಮೈಸೂರಿನಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕಾಗಿ 300 ಎಕರೆ ಭೂಮಿ ಮೀಸಲು: ಸಚಿವ ಬೈರತಿ ಸುರೇಶ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 21 ವೀಕ್ಷಣೆಗಳು
bhyrati suresh

ಸುವರ್ಣವಿಧಾನಪರಿಷತ್ತು: ಅರಮನೆ ನಗರಿ ಮೈಸೂರಿನಲ್ಲಿ 300 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಪರಿಷತ್ತಿನಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಮಗ್ರ ಮೈಸೂರು ಅಭಿವೃದ್ಧಿಗೆ ನೀಲನಕ್ಷೆಯನ್ನು ಸಿದ್ಧಪಡಿಸಲಾಗುತ್ತಿದ್ದು, ಸುಸಜ್ಜಿತವಾಗಿ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ಬಳ್ಳಾರಿಯ 100 ಎಕರೆ, ಬೀದರ್ ನಲ್ಲಿ 132 ಎಕರೆ, ಬೆಳಗಾವಿಯಲ್ಲಿ 130 ಎಕರೆ, ಚಾಮರಾಜನಗರದಲ್ಲಿ 14 ಎಕರೆ, ಚಿಕ್ಕಮಗಳೂರಿನಲ್ಲಿ 208 ಎಕರೆ, ಗದಗ-ಬೆಟಗೇರಿಯಲ್ಲಿ 18 ಎಕರೆ ಹಾಗೂ ಹಾಸನದಲ್ಲಿ 1142 ಎಕರೆ ಪ್ರದೇಶಗಳಲ್ಲಿ ಸುಸಜ್ಜಿತವಾದ ನೂತನ ಬಡಾವಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಸದನಕ್ಕೆ ಮಾಹಿತಿ ನೀಡಿದರು.

ಪಾರದರ್ಶಕವಾಗಿ ನಿವೇಶನ ಹಂಚಿಕೆ

ವಿವಿಧ ನಗರಗಳಲ್ಲಿ ನಾಗರಿಕರಿಗೆ ನಿವೇಶನ ಹಂಚಿಕೆಯಲ್ಲಿ ನಿಗದಿತ ಮೀಸಲಾತಿಯನ್ನು ಪಾಲಿಸಲಾಗುತ್ತಿದ್ದು, ಸಂಪೂರ್ಣವಾಗಿ ಪಾರದರ್ಶಕತೆಯನ್ನು ಕಾಪಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಮೈಸೂರಿನ ರಾಯನಕೆರೆ, ವರುಣಕಎರೆ ಸೇರಿದಂತೆ ಮತ್ತಿತರ ಕೆರೆಗಳ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ. ಸ್ವಚ್ಛ ಭಾರತ್ ಅಭಿಯಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದೂ ಅವರು ಹೇಳಿದರು.

ನದಿ ಮೂಲ ರಕ್ಷಿಸಿ ಬಡಾವಣೆಗಳ ಅಭಿವೃದ್ಧಿ

ರಾಜ್ಯದ ಎಲ್ಲಾ ನಗರಗಳಲ್ಲಿ ನದಿ ಮೂಲಗಳು ಕಲುಷಿತಗೊಳ್ಳದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಗದಿಪಡಿಸಿರುವ ಅಗತ್ಯ ಬಫರ್ ಅನ್ನು ಕಾಯ್ದಿರಿಸಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.

10 ಎಕರೆಗೂ ಮೇಲ್ಪಟ್ಟ ಬಡಾವಣೆಗಳನ್ನು ಅಭಿವೃದ್ಧಿಪಡಿಸುವಾಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಸ್.ಟಿ.ಪಿ ಯನ್ನು ಕಡ್ಡಾಯವಾಗಿ ಅಳವಡಿಸುವ ನಿಬಂಧನೆಯಿದ್ದು, ಅದರಂತೆ 10 ಎಕರೆಗಿಂತ ಮೇಲ್ಪಟ್ಟ ಎಲ್ಲಾ ಬಡಾವಣೆಗಳಲ್ಲಿ ಎಸ್.ಟಿ.ಪಿ ಸ್ಥಳಗಳನ್ನು ಗುರುತಿಸಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಕರಾವಳಿ ಜಿಲ್ಲೆಗಳಲ್ಲಿ ನಿವೇಶನ ವಿನ್ಯಾಸಕ್ಕೆ ವಿಶೇಷ ಸೇವೆ

ಸದಸ್ಯ ಮಂಜುನಾಥ್ ಭಂಡಾರಿ ಅವರು ಕೇಳಿದ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವ ಬೈರತಿ ಸುರೇಶ್ ಅವರು, ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ ಪಂಚಾಯತಿಯಲ್ಲಿನ ಒಂದು ಎಕರೆ ಒಳಗಿನ ಜಮೀನುಗಳಿಗೆ ಅನುಮೋದನೆ ನೀಡುವ ಪ್ರಕರಣಗಳಿಗೆ ತಾಂತ್ರಿಕ ಅನುಮೋದನೆ ನೀಡಲು ಸಹಾಯಕ ನಿರ್ದೇಶಕರ ಕಛೇರಿ ಹಾಗೂ ಹತ್ತಿರದ ಯೋಜನಾ ಪ್ರಾಧಿಕಾರಗಳ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ, ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿಯೇ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.

ಕರಾವಳಿ ಜಿಲ್ಲೆ ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತ ನಿಯಮ ಗಳನ್ನು ಸಮನ್ವಯಗೊಳಿಸಲು ಮತ್ತು ವಿನ್ಯಾಸ ಅನುಮೋದನೆ ಯನ್ನು ಪಾರದರ್ಶಕತೆ ಹಾಗೂ ಜನ ಸ್ನೇಹಿಯಾಗಿಸಲು ಅನುಕೂಲವಾಗುವಂತೆ ಸೆಂಟರ್ ಫಾರ್ ಇ ಗವರ್ನೆನ್ಸ್ ವತಿಯಿಂದ ಯೂನಿಫೈಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶ ವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment