Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಚಾಮರಾಜನಗರದಲ್ಲಿ ಒಂದೇ ಕಡೆ 5 ಹುಲಿ ಪತ್ತೆ: ಕಾರ್ಯಾಚರಣೆಗೆ ಬಂದ ಆನೆಗಳಿಗೆ ಗ್ರಾಮಸ್ಥರಿಂದ ಭರ್ಜರಿ ಸ್ವಾಗತ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 18 ವೀಕ್ಷಣೆಗಳು
Chamarajanagar tiger

ಚಾಮರಾಜನಗರ ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳು ಒಂದೇ ಕಡೆ ಇರುವುದು ಪತ್ತೆಯಾಗಿ ಆತಂಕ ಮೂಡಿಸಿದ ಬೆನ್ನಲ್ಲೇ ಹುಲಿಗಳ ಸೆರೆಗೆ ಬಂದ ಎರಡು ಆನೆಗಳಿಗೆ ಗ್ರಾಮಸ್ಥರು ಭರ್ಜರಿ ಸ್ವಾಗತ ಕೋರಿದ್ದಾರೆ.

ಹುಲಿಗಳ ಸೆರೆಗೆ ಕಾರ್ಯಾಚರಣೆ ನಡೆಸಲು ಆಗಮಿಸಿದ ಈಶ್ವರ ಹಾಗೂ ಲಕ್ಷ್ಮಣ ಆನೆಗಳನ್ನು ಕರೆ ತರಲಾಗಿದ್ದು, ಗ್ರಾಮಸ್ಥರು ಆನೆಗಳಿಗೆ ಪೂಜೆ ಮಾಡಿ ಭರ್ಜರಿ ಸ್ವಾಗತ ನೀಡಿದರು. ಸಂಜೆ ಬಳಿಕ ಮತ್ತೊಂದು ಹಂತದ ಕೂಂಬಿಂಗ್ ನಡೆಯುವ ಸಾಧ್ಯತೆ ಇದೆ.

ಕಲ್ಲು ಕ್ವಾರಿ ಬಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಡ್ರೋಣ್ ಮೂಲಕ ಕಾರ್ಯಾಚರಣೆ ನಡೆಸಿದಾಗ ಕಲ್ಲು ಕ್ವಾರಿಯೊಂದರ ಮೇಲೆ 5 ಹುಲಿಗಳು ಒಂದೇ ಕಡೆ ಮಲಗಿರುವುದು ಪತ್ತೆಯಾಗಿತ್ತು.  5 ಹುಲಿಗಳು ಒಂದೇ ಕಡೆ ಇರುವುದರಿಂದ ಹುಲಿ ಸೆರೆ ಕಾರ್ಯಾಚರಣೆ ಕಷ್ಟ ಎಂದು ಹೇಳಲಾಗಿದೆ.

ಹುಲಿಗಳ ಇರುವಿಕೆ ಪತ್ತೆಯಾದ ಬೆನ್ನಲ್ಲೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯ ಅಧಿಕಾರಿಗಳು ಕೂಂಬಿಂಗ್ ತೀವ್ರಗೊಳಿಸಿದ್ದಾರೆ.

3 ಊರುಗಳಲ್ಲಿ ನಿಷೇಧಾಜ್ಞೆ ಜಾರಿ

ನಂಜೇದೇವನಪುರ ಗ್ರಾಮದ ಕುಮಾರಸ್ವಾಮಿ ಎಂಬವರ ಜಮೀನಿನಲ್ಲಿ 5 ಹುಲಿ ಓಡಾಟ ಪತ್ತೆಯಾದ ಬಳಿಕ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿದ ಹಿನ್ನೆಲೆಯಲ್ಲಿ ಎರಡು ದಿನ ಮೂರು ಗ್ರಾಮಗಳಲ್ಲಿ ನಿಷೇಧಾಜ್ಞೆ ಹೊರಡಿಸಿ ಚಾಮರಾಜನಗರ ತಹಸೀಲ್ದಾರ್ ಗಿರಿಜಾ ಆದೇಶಿಸಿದ್ದಾರೆ.

ನಂಜೆದೇವನಪುರ ಸೇರಿ ಉಡಿಗಾಲ, ವೀರನಪುರ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಡಿ‌.22 ಹಾಗೂ 23ರಂದು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯಬಾರೆಂದು ಕಟ್ಟೆಚ್ಚರ ವಹಿಸಲಾಗಿದ್ದು, ಯಾರೂ ಗುಂಪು ಸೇರದಂತೆ ಹಾಗೂ‌ ಒಬ್ಬರೇ ಓಡಾಡದಂತೆ, ಕಾರ್ಯಾಚರಣೆ ವೇಳೆ ಜನರು ಮನೆಯಲ್ಲೇ ಇರುವಂತೆ ಆದೇಶಿಸಲಾಗಿದೆ‌.

ಸಿಎಂಗೆ ಕರೆ ಮಾಡಿದ ಶಾಸಕರು: ಹುಲಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ನಂಜೇದೇವನಪುರಕ್ಕೆ ಭೇಟಿ ನೀಡಿ, ಖುದ್ದು ಪರಿಶೀಲನೆ ನಡೆಸಿದರು. 5 ಹುಲಿಗಳಿರುವ ಹಿನ್ನೆಲೆಯಲ್ಲಿ ಸೆರೆ ಹಿಡಿಯುವುದು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಆನೆಗಳನ್ನು ಬಳಸಿಕೊಂಡು ಹುಲಿಗಳನ್ನು ಕಾಡಿಗೆ ಓಡಿಸುವ ಕೆಲಸ ಮಾಡುತ್ತೇವೆಂಬ ಅರಣ್ಯ ಇಲಾಖೆ ಮಾತಿಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಹುಲಿಗಳನ್ನು ಕಾಡಿಗೆ ಅಟ್ಟಬಾರದು, ಸೆರೆ ಹಿಡಿಯಬೇಕೆಂದು ರೈತರು ಒತ್ತಾಯಿಸಿದರು.

ರೈತರ ಸಮಸ್ಯೆ ಆಲಿಸಿದ ಶಾಸಕರು, ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿ ನಂಜದೇವನಪುರದಲ್ಲಿ 5 ಹುಲಿ ಪ್ರತ್ಯಕ್ಷವಾದ ಬಳಿಕ ಜನರು ತೀರಾ ಆತಂಕಕ್ಕೆ ಒಳಗಾಗಿದ್ದಾರೆ‌. ಹೆಚ್ಚುವರಿ ವೈದ್ಯರು ಹಾಗೂ ತಜ್ಞರನ್ನು ಕಳುಹಿಸುವಂತೆ ಮನವಿ ಮಾಡಿದರು.

ಶಾಸಕ ಪುಟ್ಟರಂಗಶೆಟ್ಟಿ ಮಾತಿಗೆ ಸಹಮತ ನೀಡಿದ ಸಿಎಂ ಸಿದ್ದರಾಮಯ್ಯ, ಈಗಲೇ ಅರಣ್ಯ ಸಚಿವರ ಜೊತೆ ಮಾತನಾಡುತ್ತೇನೆಂದು ಭರವಸೆ ನೀಡಿದ್ದಾರೆ. ಸಿಎಂ ಜೊತೆ ಮಾತನಾಡಿದ ಬಳಿಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೂ ಕರೆ ಮಾಡಿ ಶಾಸಕರು ಸಮಸ್ಯೆ ಹೇಳಿದರು. ಆದ ಸಚಿವರು, ಕೂಡಲೇ ಒಂದು ಟೀಂ ಕಳುಹಿಸಿ ಕೊಡುವುದಾಗಿ ಭರವಸೆ ನೀಡಿದರು.

ಗುಂಡ್ಲುಪೇಟೆಯಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲೂಕಿನ ಬರಗಿ, ಮುಕ್ತಿ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದ ಹುಲಿಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಮುಕ್ತಿ ಕಾಲೋನಿಯ ಗ್ರಾಮದ ಜಮೀನು ಒಂದರಲ್ಲಿ ಕಾಣಿಸಿಕೊಂಡ ಹಿನ್ನೆಲೆ ಅರಾವಳಿಕೆ ಮದ್ದು ನೀಡುವುದರ ಮೂಲಕ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

ಹುಲಿಯು ಆರೋಗ್ಯಕರವಾಗಿದೆ ಎಂದು ಅರಣ್ಯ ಇಲಾಖೆ ಪಶು ವೈದ್ಯಧಿಕಾರಿಗಳು ಮಾಹಿತಿ ನೀಡಿದ್ದು, ಸೆರೆಯಾದ ಹುಲಿಯನ್ನು ಇಲಾಖೆಯ ಅಧಿಕಾರಿಗಳ ಸೂಚನೆ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗುಂಡ್ಲುಪೇಟೆ ಬಫರ್ ಜೋನ್ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಮಾಹಿತಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment