Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಗುಜರಾತ್ ಗೆ ಸಾಗಿಸುತ್ತಿದ್ದ 523 ಚೀಲ ಪಡಿತರ ಅಕ್ಕಿ ವಶ; 5 ಮಂದಿ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 42 ವೀಕ್ಷಣೆಗಳು
ballary news

ಬಳ್ಳಾರಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಅಡ್ಡೆ ಮೇಲೆ ಶುಕ್ರವಾರ ಬೆಳಿಗ್ಗೆ ನಸುಕಿನ ಜಾವ ದಾಳಿ ನಡೆಸಿದ ಅಧಿಕಾರಿಗಳು 523 ಚೀಲ ಅಕ್ಕಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬಳ್ಳಾರಿಯ ಎಸ್.ಎಲ್.ಎನ್ ಮಾಲ್ ಬಳಿ ಇರುವ ಪುಲ್ಲಯ್ಯ ಕಾಂಪೌಂಡ್ ಒಳ ಆವರಣದಲ್ಲಿ ಸಂಗ್ರಹಿಸಲಾಗಿದ್ದ ಪಡಿತರ ಅಕ್ಕಿಯನ್ನು ಸಾಗಿಸಲು ಯತ್ನಿಸುತ್ತಿದ್ದಾಗ ಸಹಾಯಕ ಆಯುಕ್ತ ರಾಜೇಶ್ ಹೆಚ್. ಡಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಅಕ್ರಮವಾಗಿ ಸಾರ್ವಜನಿಕ ಪಡಿತರ ಅಕ್ಕಿಯನ್ನು ಬಳ್ಳಾರಿ ಮೂಲದ ಪಿಕ್ ಅಪ್ ವಾಹನಗಳ ಮೂಲಕ ಪಡಿತರ ಅಂಗಡಿಗಳಿಂದ ಅಕ್ರಮವಾಗಿ ಸಂಗ್ರಹಿಸಿ ಗುಜರಾತ್ ಮೂಲದ ಸರಕು ಲಾರಿಯಲ್ಲಿ ಸಾಗಾಣಿಕೆ ಮಾಡಲು ಸಣ್ಣ ವಾಹನ ದಿಂದ ಲಾರಿಗೆ ತುಂಬುತ್ತಿರುವ ವೇಳೆ  ಶುಕ್ರವಾರ ಮುಂಜಾನೆ ಸಹಾಯಕ ಆಯುಕ್ತರು  ದಿಢೀರ್ ದಾಳಿ ನಡೆಸಿದರು.

523 ಚೀಲ ಅಕ್ಕಿ, ಲಾರಿ, ಎರಡು ಪಿಕ್ ಅಪ್ ವಾಹನ, ಇಬ್ಬರು ಗುಜರಾತ್ ಮೂಲದ ಚಾಲಕರು, ಬಳ್ಳಾರಿ ಮೂಲದ ಒಬ್ಬ ಚಾಲಕ, 5 ಅಮಾಲಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಒಬ್ಬ ಚಾಲಕ ಮತ್ತು 5 ಅಮಾಲಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ವಿಚಾರಣೆ ವೇಳೆ ಸದರಿ ಅಕ್ಕಿ ಚೀಲಗಳನ್ನು ಅಕ್ರಮವಾಗಿ ಗುಜರಾತ್ ರಾಜ್ಯಕ್ಕೆ ತೆಗೆದುಕೊಂಡು ಹೋಗಲು ತಯಾರಿ ಮಾಡುತ್ತಿರುವುದಾಗಿ ಗುಜರಾತ್ ಮೂಲದ ಚಾಲಕ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment