Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುತ್ತಿದ್ದ 570 ಮಂದಿ ಅರೆಸ್ಟ್: ಸಚಿವ ಕೆಎಚ್ ಮುನಿಯಪ್ಪ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 17 ವೀಕ್ಷಣೆಗಳು
kh muniyappa

ಬೆಳಗಾವಿ, ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಬೆಳಗಾವಿ ಅಧಿವೇಶನದ ಮೊದಲ ದಿನವಾದ ಸೋಮವಾರ ವಿಧಾನ ಪರಿಷತ್ ನಲ್ಲಿ ಸದಸ್ಯ ಸಿಟಿ ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದರು.

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದರು.

ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆ.ಎಫ್.ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ.

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ.

ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದು ಪರಿಷತ್ ನಲ್ಲಿ ತಿಳಿಸಿದ ಸಚಿವ ಮುನಿಯಪ್ಪ ಅವರು ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಪ್ರತಿ ಮಾಹೆ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಆಹಾರ ಅದಾಲತ್ಗಳನ್ನು ನಡೆಸಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಆಹಾರ ಜಾಗೃತ ದಳ ರಚಿಸಿ ಅಕ್ರಮಗಳ ಬಗ್ಗೆ ನಿಯಮಾನುಸಾರ ಕ್ರಮವಹಿಸಲಾಗುತ್ತಿದೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment