Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಯಲ್ಲಾಪುರದಲ್ಲಿ ಭೀಕರ ಅಪಘಾತಕ್ಕೆ 6 ಡೆಲಿವರಿ ಬಾಯ್ಸ್‌ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
yellapur accident

ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಡೆಲಿವರಿ ಬಾಯ್ಸ್‌ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರವಾರ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಸಂಭವಿಸಿದೆ.

ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ‘ಸ್ವಿಗ್ಗಿ’ (Swiggy) ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜ್ (48 ವರ್ಷ), ​ಅಭಿಷೇಕ್ ಈಶ್ವರ್ (28 ವರ್ಷ), ​ಅಕ್ಷಯ (26 ವರ್ಷ), ​ಅಭಿಷೇಕ್ (26 ವರ್ಷ), ​ಸಂಜೀವ/ಸಂಜಯ ಅಂಗಡಿ (33 ವರ್ಷ – ವಾಹನ ಚಾಲಕ), ​ಮಂಜುನಾಥ ಚುಲಕಿ (32 ವರ್ಷ) ಮೃತಪಟ್ಟಿದ್ದಾರೆ.

​ಮೂವರಿಗೆ ಗಂಭೀರ ಗಾಯ: ​ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಶಿವರಾಜ್ ದುರ್ಗಪ್ಪ ಮಡಿವಾಳ್ (22 ವರ್ಷ), ​ಸಚಿನ್, ​ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28 ವರ್ಷ) ಸೇರಿದಂತೆ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡದಿಂದ ರಾತ್ರಿ ವೇಳೆ ಧರ್ಮಸ್ಥಳ ಹಾಗೂ ಮಂಗಳೂರು ಕಡೆಗೆ 9 ಹುಡುಗರ ಗುಂಪು ಪ್ರವಾಸ ಹೊರಟಿತ್ತು. ಅರಬೈಲ್ ಘಾಟ್‌ನ ಬಳಗಾರ್ ತಲುಪುತ್ತಿದ್ದಂತೆ ತೂಫಾನ್ ವಾಹನ ಹಾಗೂ ಲಾರಿ (KA-22-AA-1008) ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೂಫಾನ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತ ಸ್ಥಳಕ್ಕೆ ಪೊಲೀಸರ ಭೇಟಿ: ​ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯಕ್ಕೆ ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment