Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ: ಸಚಿವ ಡಾ. ಶರಣಪ್ರಕಾಶ ಪಾಟೀಲ್‌

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು

ಬೆಂಗಳೂರು: 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇಕಡ 75ರಷ್ಟು ರಿಯಾಯಿತಿ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಹಿರಿಯ ಪತ್ರಕರ್ತರ ವೇದಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ಹಿರಿಯ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಿಸಿ ಸಚಿವರು ಭಾಷಣ ಮಾಡಿದರು.

ಮುಖ್ಯಮಂತ್ರಿಗಳ ಜೊತೆ ಸಮಾಲೋಚಿಸಿ ಮುಂದಿನ ದಿನಗಳಲ್ಲಿಯೂ ಶೇ. 25ರಷ್ಟು ಹಣದ ಬಗ್ಗೆಯೂ ರಿಯಾಯಿತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಪತ್ರಕರ್ತರು ನಮ್ಮ ಸರ್ಕಾರದ ಜವಾಬ್ದಾರಿ, ನಿವೃತ್ತರಾದ ಹಿರಿಯರಿಗೆ ಗೌರವಯುತ ಜೀವನ ನಡೆಸಲು ಅನುವು ಮಾಡಿಕೊಡಲು ನಾವು ಬದ್ಧರಾಗಿದ್ದೇವೆ ಎಂದರು.

ಸಮಾಜಕ್ಕೆ ಕೊಡುಗೆ ನೀಡಿ ವೃತ್ತಿಯಿಂದ ನಿವೃತ್ತರಾಗಿರುವ ಹಿರಿಯ ಪತ್ರಕರ್ತರಿಗೆ ಪಿಂಚಣಿ ಸೌಲಭ್ಯ ಒದಗಿಸಲಾಗುತ್ತಿದ್ದು, ಇದರ ನಿಯಮಗಳು, ಪ್ರಕ್ರಿಯೆಗಳನ್ನು ಸರಳೀಕೃತಗೊಳಿಸಲು ಕ್ರಮ ಕೈಗೊಳ್ಳಲಾಗುವುದು  ಎಂದು ಡಾ. ಪಾಟೀಲ್‌ ತಿಳಿಸಿದರು.

ಹಿರಿಯ ಪತ್ರಕರ್ತರಿಗೂ ಯಶಸ್ವಿನಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸಲು ಕ್ರಮ ವಹಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ತಿಳಿಸಿದರು.

ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾಧ್ಯಮದ ಪ್ರತಿನಿಧಿಗಳಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ವತಿಯಿಂದ ಗುರುತಿನ ಚೀಟಿ ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಜಯದೇವ ಸಂಸ್ಥೆಯ ನಿರ್ದೇಶಕರಾದ ಡಾ. ಬಿ. ದಿನೇಶ್‌, ಹಿರಿಯ ಪತ್ರಕರ್ತರ ವೇದಿಕೆ ಅಧ್ಯಕ್ಷ ಆರ್‌.ಪಿ. ಸಾಂಬ ಸದಾಶಿವರೆಡ್ಡಿ, ಹಿರಿಯ ಅಧಿಕಾರಿಗಳು, ಎಂ.ಎ. ಪೊನ್ನಪ್ಪ, ವೆಂಕಟೇಶ್‌ ಪ್ರಸಾದ್‌ ಇತರರು ಹಾಜರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment