Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ರಾಜ್ಯ

ಕೊಪ್ಪಳದ ಬಂಕಾಪುರ ಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
wolf
wolf

ಬೆಂಗಳೂರು: ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮಾದ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದ್ದು, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿಯೇ ಮೊದಲಾದ ಹಲವು ವನ್ಯಜೀವಿಗಳ ತಾಣವಾಗಿದೆ.

ಇಂಡಿಯನ್ ಗ್ರೇ ಉಲ್ಫ್ ಎಂಬ ಪ್ರಭೇದದ ತೋಳಗಳು ಈ ಸಂರಕ್ಷಿತ ಪ್ರದೇಶದಲ್ಲಿದ್ದು, ಇತ್ತೀಚೆಗೆ 8 ಮರಿಗಳಿಗೆ ಒಂದ ತೋಳ ಜನ್ಮ ನೀಡಿದೆ. ಇವುಗಳ ಪೈಕಿ ಸಾಮಾನ್ಯವಾಗಿ ಪ್ರತಿಶತ 50ರಷ್ಟು ಬದುಕುಳಿಯುವ ಸಾಧ್ಯತೆ ಇರುತ್ತದೆ, ಆದರೆ ಎಲ್ಲ ತೋಳದ ಮರಿಗಳನ್ನೂ ಉಳಿಸಲು ಅರಣ್ಯಾಧಿಕಾರಿಗಳು ಕ್ರಮವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಪ್ರದೇಶವನ್ನು ತೋಳವನ್ಯಧಾಮ ಎಂದು 15ನೇ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಘೋಷಿಸಲಾಗಿದ್ದು, ಜ.18ರಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೂ ನಿರ್ಣಯಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬಂಕಾಪೂರ ತೋಳ ವನ್ಯಧಾಮದಲ್ಲಿ ಈ 8 ಮರಿಗಳೂ ಸೇರಿ ಸುಮಾರು 35-40 ತೋಳಗಳಿವೆ. ಇವುಗಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರವಾಸಿ ತಾಣವಾಗಿ ಅಭಿವೃದ್ಧಿ:

ಗಂಗಾವತಿ ನಗರದಿಂದ 15 ಕಿ.ಮೀ ದೂರದಲ್ಲಿರುವ ಈ ವನ್ಯಜೀವಿ ಧಾಮದಲ್ಲಿ ಸಫಾರಿ ವ್ಯವಸ್ಥೆ ಕಲ್ಪಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment