Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ರೈತರಿಗೆ ಹಗಲಿನಲ್ಲೇ 5 ಗಂಟೆ ಕಾಲ 3 ಫೇಸ್ ವಿದ್ಯುತ್ ಪೂರೈಕೆ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 25 ವೀಕ್ಷಣೆಗಳು
siddaramiah

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಇಂದು ನಾನು ಉದ್ಘಾಟನೆ ಮಾಡಿರುವ, 70 ಮೆವ್ಯಾ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ ಎಂದರು.

ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ. ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ50 ರಷ್ಟು ಹಣ ಕೊಡುತ್ತದೆ. ಶೇ20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ 30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ ಎಂದರು.

ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡ್ತೇವೆ ಎಂದು ವಿವರಿಸಿದರು.

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದರು.

ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment