Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಹಿಸುದ್ದಿ: ಪಿಂಚಣಿಗೆ ವಾರ್ಷಿಕ ಆದಾಯ 1.20 ಲಕ್ಷ ರೂ.ಗೆ ಏರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 45 ವೀಕ್ಷಣೆಗಳು
g parameshwara

ಬೆಂಗಳೂರು: ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ವಾರ್ಷಿಕ ಆದಾಯ ಮಿತಿಯನ್ನು 32,000ದಿಂದ 1,20,000 ರೂ.ಗೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ, ವಿವಿಧ ಸಾಮಾಜಿಕ ಪಿಂಚಣಿಗಳಾದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿಗಳಿಗೆ 32 ಸಾವಿರ ರೂ. ಆದಾಯ ಮಿತಿ ಇತ್ತು. ಇದೀಗ  ₹1,20,000 ಗಳಿಗೆ ಏರಿಕೆ ಮಾಡುವ ಮೂಲಕ ಬಹುಕಾಲದ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಎಂದರು.

ಫಲಾನುಭವಿಗಳ ದಾಖಲೆ ಪರಿಶೀಲನೆ

ರಾಜ್ಯದಲ್ಲಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿ ಸಂಯೋಜಿಸಿದಾಗ 23,14,544 ಫಲಾನುಭವಿಗಳು ಸಂದೇಹಾಸ್ಪದ ಎಂದು ಕಂಡುಬಂದಿದ್ದು, ಈ ಫಲಾನುಭವಿಗಳ ಭೌತಿಕ ಪರಿಶೀಲನೆಗಾಗಿ ಸಂಯೋಜನೆ ಮೊಬೈಲ್‌ ಆ್ಯಪ್ ಸಿದ್ಧಪಡಿಸಿ ಪರಿಶೀಲನೆ ನಡೆಸಲಾಗಿತ್ತು. ಈ ಸಮಯದಲ್ಲಿ ದಾಖಲಾತಿಗಳನ್ನು ಹಾಜರುಪಡಿಸದ, ನೀಡಿದ ವಿಳಾಸದಲ್ಲಿ ವಾಸವಿಲ್ಲದಿದ್ದ ಮತ್ತು ಆದಾಯ ದೃಢೀಕರಣ ಪತ್ರ ಹಾಜರುಪಡಿಸದಿದ್ದ 18,06,032 ಮಂದಿಯ ಪಿಂಚಣಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಕೆಲವು ಸಂದೇಹಾಸ್ಪದ ಫಲಾನುಭವಿಗಳು ಪತ್ತೆಯಾಗಿದ್ದಾರೆ: ಗ್ರಾಮ ಆಡಳಿತ ಅಧಿಕಾರಿಗಳು ಸಂಯೋಜನೆ ಮೊಬೈಲ್‌ ಆ್ಯಪ್ ಮೂಲಕ ಪರಿಶೀಲಿಸಿದ ನಂತರ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಂದ ನಿಯಮಾನುಸಾರ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ನೀಡಲು ನಿರ್ದೇಶನ ನೀಡಲಾಗಿದೆ. ಆದರೆ, 23,14,544 ಸಂದೇಹಾಸ್ಪದ ಫಲಾನುಭವಿಗಳ ಭೌತಿಕ ಪರಿಶೀಲನೆ ಸಮಯದಲ್ಲಿ ಆದಾಯವು ₹1,20 ಸಾವಿರಕ್ಕಿಂತ ಹೆಚ್ಚಿರುವುದು ಕಂಡುಬಂದಿದೆ.

23,14,544 ಮಂದಿಯ ಪೈಕಿ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000ಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವಂತಹ ಫಲಾನುಭವಿಗಳ ಪಿಂಚಣಿಯನ್ನು ಮುಂದುವರೆಸುವಂತೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಸೂಚಿಸಿದ್ದರು.

ಅದರಂತೆ 23,14,544 ಮಂದಿಯ ಪೈಕಿ ಪರಿಶೀಲನೆಯ ನಂತರ ₹32,000ಕ್ಕಿಂತ ಹೆಚ್ಚು ಹಾಗೂ ₹1,20,000 ಒಳಗಿನ ವಾರ್ಷಿಕ ಆದಾಯ ಮಿತಿಯನ್ನು ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದುವರಿಸಲು ಕಂದಾಯ ಇಲಾಖೆಯು ಆದೇಶಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment