Home ರಾಜ್ಯ Belagavi Session ಮಾಜಿ ಸೈನಿಕರಿಗೆ ನಿವೇಶನ ನೀಡಲು ಕ್ರಮ: ಸಚಿವ ಕೃಷ್ಣ ಬೈರೇಗೌಡ

Belagavi Session ಮಾಜಿ ಸೈನಿಕರಿಗೆ ನಿವೇಶನ ನೀಡಲು ಕ್ರಮ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಪ್ರಸ್ತುತ 16065 ಮಾಜಿ ಸೈನಿಕರು ಭೂ ಮಂಜುರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 6783  ಅರ್ಜಿ ವಿಲೇವಾರಿ ಮಾಡಿದ್ದು, 9282  ಅರ್ಜಿಗಳು ಬಾಕಿ ಇವೆ ಎಂದರು.

by Editor
0 comments
krishna byre gowda

ಬೆಳಗಾವಿ: ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದ ಬುಧವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯ ಸಿಎನ್ ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ ಮಾಡಿ, ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಪ್ರಸ್ತುತ 16065 ಮಾಜಿ ಸೈನಿಕರು ಭೂ ಮಂಜುರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 6783  ಅರ್ಜಿ ವಿಲೇವಾರಿ ಮಾಡಿದ್ದು, 9282  ಅರ್ಜಿಗಳು ಬಾಕಿ ಇವೆ ಎಂದರು.

banner

ರಾಜ್ಯದಲ್ಲಿ 16,644 ಪೋಡಿ ಮುಕ್ತ ಗ್ರಾಮ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಬಹು ಮಾಲಿಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬುಧವಾರ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು,ಅದರಲ್ಲಿ 5,33,545 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಪ್ರಕರಣಗಳಲ್ಲಿನ ನ್ಯೂನತೆಗಳನ್ನು ಶೀಘ್ರವಾಗಿ ಸರಿಪಡಿಸಿಕೊಂಡು ಕಂದಾಯ ಹಾಗೂ ಭೂ ಮಾಪನ ಇಲಾಖೆಯ ನಡವಳಿಗಳೊಂದಿಗೆ ವಿಳಂಬವಿಲ್ಲದೆ ಪೋಡಿ ದುರಸ್ತಿ ಮಾಡಲಾಗುತ್ತಿದೆ ಎಂದರು.

ಮ್ಯುಟೇಷನ್ ಪೋಡಿಯಂತಹ ಪ್ರಕ್ರಿಯೆಯನ್ನು ಪೂರೈಸಲು ನಾಲ್ಕರಿಂದ ಆರು ತಿಂಗಳವರೆಗೆ ಕಾಲಾವಕಾಶ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ನಮ್ಮ ಸರ್ಕಾರವು ರೈತರಿಗೆ ಸಂಬಂಧಪಟ್ಟ ಇಂತಹ ಕೆಲಸಗಳಿಗೆ ಆದ್ಯತೆ ನೀಡಿ ಎಲ್ಲಾ ಹಂತಗಳ ಪ್ರಕ್ರಿಯೆಗಳನ್ನು ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಚುರುಕುಗೊಳಿಸಿದ್ದು, ಪೋಡಿಗೆ ಯೋಗ್ಯವಾಗಿರುವ ಯಾವುದೇ ಪ್ರಕರಣಗಳನ್ನು ಸರಾಸರಿ ಒಂದು ತಿಂಗಳ ಅವಧಿಯಲ್ಲಿ ಪೂರೈಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಅಪ್‍ಗ್ರೇಡ್ ಆದಾಯ ಪ್ರಗತಿ ಶೇ 30 ಹೆಚ್ಚಳ; ಇಬಿಐಟಿಡಿ & ಪಿಎಟಿ ನಷ್ಟ ಶೇ. 50 ಕುಸಿತ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಪಿಂಚಣಿ ಹಣ ತೀರಾ ಕಡಿಮೆ: ಸುಪ್ರೀಂಕೋರ್ಟ್ ಕೇರಳದಲ್ಲಿ 2 ಮಂಕಿಪಾಕ್ಸ್ ಪ್ರಕರಣ ಪತ್ತೆ! Belagavi Session ಮಾಜಿ ಸೈನಿಕರಿಗೆ ನಿವೇಶನ ನೀಡಲು ಕ್ರಮ: ಸಚಿವ ಕೃಷ್ಣ ಬೈರೇಗೌಡ World News ಅಮೆರಿಕದಲ್ಲಿ ಕಟ್ಟಡಕ್ಕೆ ವಿಮಾನ ಡಿಕ್ಕಿ ಹೊಡೆದು ಇಬ್ಬರು ಪೈಲೆಟ್ ಗಳ ಸಾವು ದೋಣಿಗೆ ಡಿಕ್ಕಿ ಹೊಡೆದ ನೌಕಾಪಡೆಯ ಸ್ಪೀಡ್ ಬೋಟ್: 13 ಮಂದಿ ದುರ್ಮರಣ ವಕ್ಫ್ ಗೆ ಸೇರಿದ ದೇವಸ್ಥಾನ, ರೈತರ ಜಮೀನು ವಾಪಸ್: ಸಚಿವ ಜಮೀರ್ ಅಹಮದ್ ಖಾನ್ ಘೋಷಣೆ ಅಂಬೇಡ್ಕರ್ ಮೇಲೆ ಗೌರವ ಇದ್ದರೆ ಸಚಿವ ಸ್ಥಾನದಿಂದ ಅಮಿತ್ ಶಾ ವಜಾ ಮಾಡಿ: ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಗಡುವು Belagavi ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ: ವಿಧಾನಪರಿಷತ್ ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ! 80 ಪ್ರಯಾಣಿಕರ ದೋಣಿಗೆ ಡಿಕ್ಕಿ ಹೊಡೆದ ಸ್ಪೀಡ್ ಬೋಟ್: 1 ಸಾವು, ಇಬ್ಬರು ನಾಪತ್ತೆ