Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

8300 ಕೋಟಿ ಎಸ್ಸಿ/ಎಸ್ಟಿ ಹಣ ದುರುಪಯೋಗಪಡಿಸಿಕೊಂಡ ಬಿಜೆಪಿ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು
ambedkar jayanti

ಬೆಂಗಳೂರು: ಎಸ್ಸಿ/ಎಸ್ಟಿ ಸಮುದಾಯದ ಅಭಿವೃದ್ಧಿಗೆ ನಿಗದಿಪಡಿಸಿದ 8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅಂಬೇಡ್ಕರ್ ಜಯಂತಿ ಅಂಗವಾಗಿ ಸೋಮವಾರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ ಎಂದರು.

ಬಜೆಟ್ ಗಾತ್ರ ಹೆಚ್ಚಾದಂತೆ scp/ tsp ಹಣ ಹೆಚ್ಚಾಗಬೇಕು. ಆದರೆ ಬಿಜೆಪಿ ಸರ್ಕಾರ ಕಡಿಮೆ ಮಾಡಿತು‌. ಆದರೆ ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೀವಿ. ಈ ಬಾರಿ 42018 ಕೋಟಿ ರೂಪಯಿಯನ್ನು ನಾವು ತೆಗೆದಿಟ್ಟಿದ್ದೀವಿ ಎಂದು ಅವರು ನುಡಿದರು.

ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ಸರಿಯಲ್ಲ. ಶಿಕ್ಷಣದ ಉದ್ದೇಶ ಜಾತಿವಾದಿಗಳಾಗುವುದಲ್ಲ. ಬಾಬಾ ಸಾಹೇಬ್ ಒಬ್ಬ ವ್ಯಕ್ತಿ ಇಡೀ ದೇಶದ ಶಿಕ್ಷಣ ವಂಚಿತ ನೂರಾರು ಜಾತಿ ಸಮುದಾಯಗಳಿಗೆ ಶಿಕ್ಷಣ ಸಿಗಲು ಕಾರಣಕರ್ತರಾದರು ಎಂದು ಅವರು ಹೇಳಿದರು.

ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು, ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಬರೀ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ನುಡಿದರು.

ಬಹುತ್ವದ ದೇಶ ನಿರ್ಮಾಣಕ್ಕೆ, ಬ್ರಾತೃತ್ವದ ಸಮಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ನುಡಿದರು.

ಸರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ ಎಂದು ಅವರು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment