Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರಕ್ಕೆ ಬೊಮ್ಮಾಯಿ ಮನವಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 36 ವೀಕ್ಷಣೆಗಳು
bommai

ನವದೆಹಲಿ: ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಗದಗ ಯಲವಿಗಿ ರೈಲ್ವೆ ಯೋಜನೆ ಹಾವೇರಿ ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತಿದ್ದು, ಸುಮಾರು 58 ಕಿ.ಮೀ ಉದ್ದದ ಈ ಯೋಜನೆಗೆ 2017-18ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ಯೋಜನೆ ಗದಗ ಹಾವೇರಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಅಷ್ಟೇ ಅಲ್ಲದೇ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಸಂಪರ್ಕ ಕಲ್ಪಿಸುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಯಾಣಿಕರ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಅನುಕೂಲವಾಗುವುದರಿಂದ ಕರ್ನಾಟಕದ ಆರ್ಥಿಕ ಚಟುವಟಿಕೆಗಳನ್ನು ಮೇಲ್ದರ್ಜೆಗೇರಿಸಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 50/50 ಅನುಪಾತದಲ್ಲಿ ಹಣಕಾಸು ಒದಗಿಸುತ್ತಿದ್ದು, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಒದಗಿಸಲಿದೆ. ಕರ್ನಾಟಕ ಸರ್ಕಾರ ಈಗಾಗಲೇ ತನ್ನ ಆದೇಶ ನಂ ಐಡಿಡಿ/91/ಎನ್‌ಎಸ್‌ಡಬ್ಲ್ಯು/2022 ರಲ್ಲಿ ದಿನಾಂಕ 18-04-2022 ರಂದು (ನಾನು ಮುಖ್ಯಮಂತ್ರಿ ಇದ್ದಾಗ) ಯೋಜನೆಯ ಶೇ 50ರಷ್ಟು ಯೋಜನಾ ವೆಚ್ಚವನ್ನು ಹಾಗೂ ಉಚಿತ ಭೂಮಿ ಕೊಡುವುದಾಗಿ ತಿಳಿಸಲಾಗಿದೆ.
ದಿನಾಂಕ 17-12-2022 ರಂದು ಪರಿಷ್ಕೃತ ಎಫ್‌ಎಸ್ಎಲ್ ಅಂದಾಜು 1.45 ಕೋಟಿ ವೆಚ್ಚದ ಟೆಂಡರ್ ಕರೆಯಲಾಗಿದ್ದು, ಸರ್ವೆ ಕಾರ್ಯ ಮುಕ್ತಾಯವಾಗಿದೆ. ಆಗಸ್ಟ್ 2025ರ ಅಂತ್ಯದೊಳಗೆ ಪರಿಷ್ಕೃತ ಡಿಪಿಆರ್ ಸಿದ್ಧವಾಗಲಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರದೊಂದಿಗೆ ತಕ್ಷಣವೇ ಸಮನ್ವಯ ಸಾಧಿಸಿ ಡಿಪಿಆರ್ ಪಡೆಯುವಂತೆ ನೈರುತ್ಯ ರೈಲ್ವೆ ವಲಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

ಯೋಜನೆಯ ಮೊದಲ ಹಂತದ ಯೋಜನಾ ವೆಚ್ಚ ಸುಮಾರು 650 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಂಡು, ಅದೇ ಸಮಯದಲ್ಲಿ ಕರ್ನಾಟಕ ಸರ್ಕಾರದ ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನೂ ಕೈಗೊಂಡು ಪ್ರಸ್ತುತ 2025-26 ನೇ ಆರ್ಥಿಕ ವರ್ಷದಲ್ಲಿ ಯೋಜನೆ ಕಾರ್ಯಾರಂಭವಾಗುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ತಾವು ಅಗತ್ಯ ಕ್ರಮ ಕೈಗೊಳ್ಳುತ್ತೀರಿ ಎಂಬ ಭರವಸೆ ಇದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment