ಮಲೆನಾಡು ಶಿವಮೊಗ್ಗದಲ್ಲಿ 6 ಮಕ್ಕಳಲ್ಲಿ ಎಚ್ ಎಂಪಿವಿ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 1ರಿಂದ 4 ವರ್ಷದೊಳಗಿನ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಎಲ್ಲರೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಕಳೆದ ನವೆಂಬರ್ ತಿಂಗಳಲ್ಲಿ ವಿವಿಧ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಲ್ಲಿ ಎಚ್ ಎಂಪಿವಿ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.
ವೈದ್ಯಕೀಯ ವರದಿ ದೃಢಪಟ್ಟ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಇದರಿಂದ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 3 ಮತ್ತು 8 ತಿಂಗಳ ಮಗುವಿನಲ್ಲಿ ಸೋಂಕು ದೃಢಪಟ್ಟಿದ್ದು, ಇಬ್ಬರೂ ಸೂಕ್ತ ಚಿಕಿತ್ಸೆ ನಂತರ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.