Home ರಾಜ್ಯ ಮೈಸೂರಿನಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆಗೆ ಕೇಂದ್ರ ಒಪ್ಪಿಗೆ

ಮೈಸೂರಿನಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆಗೆ ಕೇಂದ್ರ ಒಪ್ಪಿಗೆ

ಮೈಸೂರಿನ ಕೆಆರ್ ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಭರವಸೆ ನೀಡಿದ್ದಾರೆ.

by Editor
0 comments
hd kumarswamy

ಮೈಸೂರಿನ ಕೆಆರ್ ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಭರವಸೆ ನೀಡಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರ ಮನವಿಗೆ ತತ್ ಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಅವರು; ಇದು ಅತ್ಯಂತ ಮಹತ್ವದ ಪ್ರಸ್ತಾವನೆ. ಈ ಬಗ್ಗೆ ಖುದ್ದು ತಾವೇ ಗಮನ ಹರಿಸುವುದಾಗಿ ತಿಳಿಸಿದರು.

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ತೆರೆಯುವಂತೆ ರೇಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು ಕುಮಾರಸ್ವಾಮಿ ಅವರು. ರೇಲ್ವೆ ಸುರಕ್ಷತೆಗೆ ಮೈಸೂರು ಭಾಗದಲ್ಲಿ ಹೆಚ್ಚು ಆದ್ಯತೆ ಕೊಡಬೇಕಿದೆ ಹಾಗೂ ಈ ಭಾಗದಲ್ಲಿ ಪ್ರಯಾಣಿಕರ ದಟ್ಟಿಣಿಯು ಹೆಚ್ಚಾಗಿದ್ದು, ಒಟ್ಟಾರೆ ರೇಲ್ವೆ ಸುರಕ್ಷತೆಯು ಮಹತ್ವದ ಅಂಶವಾಗಿದೆ ಎಂದು ಕುಮಾರಸ್ವಾಮಿ ಅವರು ರೇಲ್ವೆ ಸಚಿವರಿಗೆ ಮನವಿ ಮಾಡಿಕೊಟ್ಟರು. ಈ ಬಗ್ಗೆ ತಕ್ಷಣವೇ ಗಮನ ಹರಿಸುವುದಾಗಿ ರೇಲ್ವೆ ಸಚಿವರು ಭರವಸೆ ನೀಡಿದರು.

ದೇವೇಗೌಡರು ಪ್ರಧಾನಿಯಾಗಿದ್ದಾಗ ಕೆ.ಆರ್.ನಗರದಲ್ಲಿದ್ದ ಹಳೆಯ ರೈಲು ನಿಲ್ದಾಣವನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಹಳೆಯ ನಿಲ್ದಾಣದ ಜಾಗ ಹಾಗೆಯೇ ಖಾಲಿ ಉಳಿದಿದ್ದು, ಭೂಸ್ವಾಧೀನದ ಸಮಸ್ಯೆ ಇಲ್ಲ ಎಂದು ಅಶ್ವಿನಿ ವೈಷ್ಣವ ಅವರಿಗೆ ಸಚಿವರು ಮನವರಿಕೆ ಮಾಡಿಕೊಟ್ಟರು.

banner

ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ಬಂದರೆ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಸ್ಥಳೀಯ ಯುವಕರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ದುಡಿಮೆಗೆ ಅವಕಾಶ ಲಭ್ಯವಾಗುತ್ತದೆ. ಮೈಸೂರು ಭಾಗದ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಬಾಕಿ ಇರುವ ವಿವಿಧ ರೇಲ್ವೆ ಯೋಜನೆಗಳನ್ನು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಕುಮಾರಸ್ವಾಮಿ ಅವರು ರೇಲ್ವೆ ಸಚಿವರ ಜತೆ ಚರ್ಚಿಸಿದರು.

ರಾಮನಗರ – ಚನ್ನಪಟ್ಟಣ ನಡುವೆ ರೇಲ್ವೆ ಲೆವೆಲ್ ಕ್ರಾಸಿಂಗ್ -44/100-200 ಬಳಿ ರೇಲ್ವೆ ಮೇಲು ಸೇತುವೆ (ಫ್ಲೈ ಓವರ್) ನಿರ್ಮಾಣದ ಬಗ್ಗೆಯೂ ಕುಮಾರಸ್ವಾಮಿ ಅವರು ಸಲ್ಲಿಸಿದ ಮನವಿಗೆ ರೇಲ್ವೆ ಸಚಿವರು ಒಪ್ಪಿಗೆ ನೀಡಿದರು. ಈ ಬಗ್ಗೆಯೂ ಕೂಡಲೇ ಕ್ರಮ ವಹಿಸುವುದಾಗಿ ಅವರು ಭರವಸೆ ನೀಡಿದರು.

ಬೆಂಗಳೂರು – ಮಂಗಳೂರು ನಡುವಿನ ರೇಲ್ವೆ ಮಾರ್ಗದಲ್ಲಿ ಪ್ರಮುಖದ್ದಾಗಿರುವ ಸಕಲೇಶಪುರ ರೇಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಮನವಿಗೂ ಸ್ಪಂದಿಸಿದ ಸಚಿವರು, ಈ ಕಾರ್ಯವನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಿ ಅತ್ಯಾಧುನಿಕ ರೇಲ್ವೆ ನಿಲ್ದಾಣ ನಿರ್ಮಾಣ ಮಾಡುವುದಾಗಿ ಅಶ್ವಿನಿ ವೈಷ್ಣವ್ ಸಚಿವರಿಗೆ ತಿಳಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ದಿಲ್ಲಿ ಅಸೆಂಬ್ಲಿ ಚುನಾವಣೆ: ಆಪ್‌ ಗೆ ಇಂಡಿಯಾ ಬಲ ಶೇ.16ರಷ್ಟು ಕುಸಿದ ಉತ್ಪಾದನೆ: ದುಬಾರೆಯಾಗಲಿದೆ ಸಕ್ಕರೆ ದರ! ಮಹಿಳೆಯರ ದೇಹದ ಆಕಾರ ಅಪಹಾಸ್ಯ ಶಿಕ್ಷಾರ್ಹ ಅಪರಾಧ: ಕೋರ್ಟ್ ಮಹತ್ವದ ತೀರ್ಪು ಬೆಂಗಳೂರು-ತುಮಕೂರು-ರಾಮನಗರ ವರ್ತುಲ ರಸ್ತೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ಸಮ್ಮತಿ ಶರಣಾದ 6 ಮಂದಿ‌ ನಕ್ಸಲರ ಸಶಸ್ತ್ರ ಹೋರಾಟದ ಹಿಂದಿನ ನೋವಿನ ಕಥೆ ಏನು ಗೊತ್ತಾ? ಮಂಗಳೂರಿನಲ್ಲಿ ಸಮುದ್ರಪಾಲಾದ ಬೆಂಗಳೂರಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು! ಸಿಎಂ ಸಮ್ಮುಖದಲ್ಲಿ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು: 24 ವರ್ಷಗಳಲ್ಲೇ ಇದೇ ಮೊದಲು! ಬೆಂಗಳೂರು: ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದ ಹೋಂಗಾರ್ಡ್! ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ! ಬೆಂಗಳೂರಿನಲ್ಲಿ ಭೀಕರ ಘಟನೆ : ಪತ್ನಿ, ಇಬ್ಬರು ಮಕ್ಕಳ ಕೊಂದ ಪತಿ!