5
ಬೆಂಗಳೂರು: ಪಾಕಿಸ್ತಾನ ವಿರುದ್ಧ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಯಾವುದೇ ಹಂತದಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು. ಇದಕ್ಕಾಗಿ ಸಜ್ಜಾಗುವಂತೆ ಕೇಂದ್ರದಿಂದ ಸೂಚನೆ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದಿಂದ ಸೂಚನೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ ಎಂದರು.
ರಾಜ್ಯ ಸರ್ಕಾರ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೊಲೀಸರಿಗೆ ರಜೆ ರದ್ದುಗೊಳಿಸಲಾಗಿದ್ದು, ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.