Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
siddaramiah

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.

ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು , ಮೇ 30, 31 ರಂದು  DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.

ತೆಗೆದುಕೊಂಡಿರುವ ಕ್ರಮಗಳು

ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.

ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99ರಷ್ಟು ಆರ್ಥಿಕ ಸಹಾಯ ಧನ ಪಾವತಿ ಮಾಡಲಾಗಿದೆ.

ಮೇ 26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ 97,351.95 ಲಕ್ಷ ರೂ.  ಅನುದಾನವಿರುತ್ತದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment