ಬೆಂಗಳೂರಿನಲ್ಲಿ ಪತ್ತೆಯಾಗಿರುವ ಎಚ್ ಎಂವಿಪಿ ವೈರಸ್ ಪ್ರಕರಣಗಳು ಅಪಾಯಕಾರಿ ಅಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 2 ಎಚ್ ಎಂವಿಪಿ ವೈರಸ್ ಪತ್ತೆಯಾಗಿದೆ. ಆದರೆ ಈ ವೈರಸ್ ಗೂ ಚೀನಾದ ವೈರಸ್ ಗೂ ಸಂಬಂಧವಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಇಲಾಖೆಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸೂಕ್ತ ಮಾಹಿತಿ ತರಿಸಿಕೊಂಡು ಚರ್ಚೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.