Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಜಾತಿ- ಧರ್ಮದ ಬೇಲಿ ಇಲ್ಲದ ಕಂಬಳ ಕ್ರೀಡೆ, ಕಲೆ ಸರ್ವರ ಸಂಭ್ರಮ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
kambala
kambala

ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವ ಉದ್ಘಾಟಿಸಿ ಮಾತನಾಡಿ ಅವರು, ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ ಎಂದರು.

ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಅವರು ಹೇಳಿದರು.

ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ‌ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ‌ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ ಎಂದು ನುಡಿದರು.

ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ ಎಂದು ಹೇಳಿದರು.

ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ. 24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕರ ನೀಡಿದೆ ಎಂದು ನುಡಿದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ರಹೀಂ ಖಾನ್ ಸೇರಿ ಹಲವು ಪ್ರಮುಖರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment