Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಭರವಸೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು

ಬೆಂಗಳೂರು: ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ ವತಿಯಿಂದ KEB ಇಂಜಿನಿಯರ್ ಅಸೋಸಿಯೇಷನ್ ರಜತ  ಮಹೋತ್ಸವದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಹಾಗೂ 17ನೇ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ  ಅವರು ಮಾತನಾಡಿದರು.

ನೂರು ಅಪರಾಧಿಗಳು ಶಿಕ್ಷೆಯಿಂದ  ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು

ಅಭಿಯೋಜಕರು ನ್ಯಾಯ ಸಂರಕ್ಷಕರು. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9 ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ  ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದರು.

ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆ ಅಗತ್ಯ

ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ  ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದರು.

ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕಕ್ಕೆ 22ನೇ ಸ್ಥಾನ

ಎನ್.ಸಿ.ಆರ್.ಬಿ  ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ  ಮತ್ತು ರಾಜಸ್ಥಾನ  22 ನೇ ಸ್ಥಾನದಲ್ಲಿದೆ. ಕೇರಳದಲ್ಲಿ 87%   ರಷ್ಟಿದೆ., ಮಿಜೋರಾಂ 92%, ಗುಜರಾತ್ ಮತ್ತು ತೆಲಂಗಾಣ 57%, ,  ಉತ್ತರ ಪ್ರದೇಶದಲ್ಲಿ 72%, ದೆಹಲಿ 89% ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಕಿವಿ ಮಾತು ಹೇಳಿದರು.

ನ್ಯಾಯ ಎತ್ತಿ ಹಿಡಿಯುವ ಪ್ರಯತ್ನ ಅಭಿಯೋಜಕರು ಮಾಡಬೇಕು.

ಸಮಸ್ಯೆಗಳ ಹೊರತಾಗಿಯೂ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು,  ಆರ್ಥಿಕ ,  ಅಪರಾಧಗಳು ಶುರುವಾಗಿದ್ದು ಇದಕ್ಕೆ ತರಬೇತಿ ಅತ್ಯಂತ ಅವಶ್ಯಕ.   ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದರು.

ಪ್ರತಿ ವರ್ಷವೂ ಸಮ್ಮೇಳನಗಳ ಜರುಗಬೇಕು ಎಂದ ಮುಖ್ಯಮಂತ್ರಿಗಳು ಅಭಿಯೋಜಕರ ಅಕಾಡೆಮಿ ಸ್ಥಾಪಿಸಿ ಅನುದಾನವನ್ನೂ ನೀಡುವ ಭರವಸೆ ನೀಡಿದ ಮುಖ್ಯಮಂತ್ರಿಗಳು, ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂಬ ಆಶ್ವಾಸನೆಯಿತ್ತರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ ಪಾಟೀಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್, ಅಪರ  ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿ, ಪೊಲೀಸ್ ಮಹಾ ನಿರ್ದೇಶಕರಾದ ಡಾ: ಎಂ. ಎ.ಸಲೀಂ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರಾದ ಅಂಜಲಿ ದೇವಿ ರಾಜ್ಯ ಅಭಿಯೋಜನಾ ಅಧಿಕಾರಿಗಳ ಸಂಘದ ಅಧ್ಯಕ್ಷ ಅಶ್ವಥನಾರಾಯಣ್,ಕಾರ್ಯದರ್ಶಿ ಸವಿತಾ ಮೊದಲಾದವರು ಉಪಸ್ಥಿತರಿದ್ದರು

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment