Sunday, December 7, 2025
Google search engine
Homeರಾಜ್ಯಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ ಸಿಎಂ ಖಡಕ್ ಸೂಚನೆ

ಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ ಸಿಎಂ ಖಡಕ್ ಸೂಚನೆ

ಬೆಂಗಳೂರು: ಖಾಸಗಿಯವರಿಂದ ಒತ್ತುವರಿಯಾಗಿರುವ ಕೆರೆ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿವಿಧ ಇಲಾಖಾವಾರು ವ್ಯಾಪ್ತಿಗೆ ಬರುವ ಕೆರೆಗಳ ಸರ್ವೆ ಕಾರ್ಯ,ಒತ್ತುವರಿ ತೆರವುಗೊಳಿಸಿರುವ ಹಾಗೂ ತೆರವಿಗೆ ಬಾಕಿ ಇರುವ ಕೆರೆಗಳ ಮಾಹಿತಿ ಪಡೆದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂದಾಜು 10710 ಕೆರೆಗಳ ಅಳತೆ ಬಾಕಿ ಇದ್ದು ಎರಡು ತಿಂಗಳ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲು ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ, ಬೃಹತ್ ನೀರಾವರಿ ಇಲಾಖೆ, ಅರಣ್ಯ, ಕಂದಾಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದಲ್ಲಿರುವ

41875 ಕೆರೆಗಳ ಪೈಕಿ 31033 ಕೆರೆಗಳು ಅಳತೆಯಾಗಿವೆ. 11212 ಒತ್ತುವರಿ ಗುರುತಿಸಲಾಗಿದೆ. 5967ಕೆರೆಗಳ ಒತ್ತುವರಿ ತೆರವು ಗೊಳಿಸಲಾಗಿದೆ. ಸುಮಾರು 5245 ಕೆರೆಗಳು ತೆರವು ಗೊಳಿಸಲು ಬಾಕಿ ಇರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.

ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 3778 ಕೆರೆಗಳಿದ್ದು, 166 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿಯಿದೆ,ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆ ಗಳಿದ್ದು 167 ಕೆರೆಗಳು ಅಳತೆ ಯಾಗಿವೆ.ಸುಮಾರು 96 ಕೆರೆಗಳ ಒತ್ತುವರಿ ತೆರವು ಬಾಕಿ ಇದೆ ಎಂದು ಹೇಳಿದರು.

ಕೆರೆಗಳ ಮಲಿನವಾಗದಂತೆ ತಡೆಯಲು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕಾರ್ಯ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಗಳಲ್ಲಿ ಮೀನುಗಾರಿಕೆ ಚಟುವಟಿಕೆ ಗಳಿಂದ ಆದಾಯ ಗಳಿಸಲು ಸಾಧ್ಯವಾಗುವಂತೆ ಆನ್ ಲೈನ್ ಟೆಂಡರ್ ಕರೆಯಲು ಸಭೆಯಲ್ಲಿ ಹಾಜರಿದ್ದ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕೆರೆಗಳ ಸುತ್ತ ಬಫರ್ ಜೋನ್ ಅನ್ನು ನಿಗದಿ ಪಡಿಸಲು ತಾಂತ್ರಿಕ ಸಮಿತಿ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವ ಬೈರತಿ ಸುರೇಶ್, ಕೆ ಎನ್ ರಾಜಣ್ಣ, ಎಂ ಎಸ್ ಬೋಸರಾಜು, ಮಂಕಾಳ ವೈದ್ಯ, ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ಡಾ.‌ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments