Home ರಾಜ್ಯ ಕರ್ನಾಟಕದ ತಿರುಪತಿ ಭಕ್ತಿಗೆ ಸಿಹಿಸುದ್ದಿ: ತಿರುಮಲದಲ್ಲಿ 200 ಕೋಟಿ ವೆಚ್ಚದಲ್ಲಿ 3 ವಸತಿ ಸಂಕೀರ್ಣ ನಿರ್ಮಾಣ

ಕರ್ನಾಟಕದ ತಿರುಪತಿ ಭಕ್ತಿಗೆ ಸಿಹಿಸುದ್ದಿ: ತಿರುಮಲದಲ್ಲಿ 200 ಕೋಟಿ ವೆಚ್ಚದಲ್ಲಿ 3 ವಸತಿ ಸಂಕೀರ್ಣ ನಿರ್ಮಾಣ

ಬೆಂಗಳೂರು: ರಾಜ್ಯ ಸರ್ಕಾರವು ತಿರುಪತಿಯ ತಿರುಮಲದ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳಿಗೆ 200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.

by Editor
0 comments
tirupati

ರಾಜ್ಯ ಸರ್ಕಾರ ತಿರುಪತಿಯ ತಿರುಮಲದ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳಿಗೆ 200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.

ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯಲ್ಲಿ ಈಗಾಗಲೇ 110 ಹವಾ ನಿಯಂತ್ರಿತ ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣಗಳ ಪೈಕಿ 132 ಹವಾನಿಯಂತ್ರಣರಹಿತ ಕೊಠಡಿಗಳನ್ನು ಹೊಂದಿರುವ ಐಹೊಳೆ ಬ್ಲಾಕ್ ಕಟ್ಟಡವನ್ನು ಮಂಗಳವಾರ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ಈ ಕಟ್ಟಡದಲ್ಲಿನ ಪ್ರತಿ ಕೊಠಡಿಗಳಿಗೆ 24 ಗಂಟೆಗಳ ಅವಧಿಗೆ ಕೊಠಡಿ ನಿರ್ವಹಣಾ ಶುಲ್ಕ ರೂ.1350/- (+ಜಿಎಸ್ ಟಿ) ನಿಗದಿ ಪಡಿಸಿದ್ದು, ಕಡಿಮೆ ಬೆಲೆಯಲ್ಲಿ ಸುಸಜ್ಜಿತ ಕೊಠಡಿಗಳನ್ನು ಯಾತ್ರಾರ್ಥಿಗಳಿಗೆ ಒದಗಿಸುವ ಮೂಲಕ ಅನುಕೂಲ ಮಾಡಿಕೊಡಲಾಗಿದೆ.

banner

ಕಲ್ಯಾಣ ಮಂಟಪ ಪೂರ್ಣ

ನೂತನವಾಗಿ ತಿರುಮಲದಲ್ಲಿ ನಿರ್ಮಿಸಲಾಗಿರುವ ವಸತಿ ಸಂಕೀರ್ಣ ಮತ್ತು ಶ್ರೀ ಕೃಷ್ಣದೇವರಾಯ ಬ್ಲಾಕ್ ನಲ್ಲಿನ 36 ಹವಾ ನಿಯಂತ್ರಿತ ಸೂಟ್‌ಗಳನ್ನು ಹಾಗೂ 500 ಆಸನಗಳ ಸಾಮರ್ಥ್ಯವುಳ್ಳ ತಿರುಮಲದಲ್ಲಿಯೇ ಬೃಹತ್ ಹಾಗೂ ನವೀನ ಮಾದರಿಯ ಸುಸಜ್ಜಿತ ಕಲ್ಯಾಣ ಮಂಟಪವಾದ ಶ್ರೀ ಕೃಷ್ಣ ಒಡೆಯರ್ ಬ್ಲಾಕ್ ಕಟ್ಟಡಗಳ ಕಾಮಗಾರಿ ಮುಕ್ತಾಯಗೊಂಡಿದ್ದು, ಅಂತಿಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದೆ.

ತಿರುಪತಿ ಹಾಗೂ ತಿರುಚಾನೂರಿನಲ್ಲಿ ಕರ್ನಾಟಕ ರಾಜ್ಯ ಛತ್ರದಲ್ಲಿ ಹಾಲಿ ಇರುವ 24 ಕೊಠಡಿಗಳನ್ನು ಮತ್ತು ಕಲ್ಯಾಣ ಮಂಟಪಗಳನ್ನು ನವೀಕರಣಗೊಳಿಸಿ, ಯಾತ್ರಾರ್ಥಿಗಳಿಗೆ ಹಂಚಿಕೆ ಮಾಡುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯ ಛತ್ರದಲ್ಲಿ 50 ಸುಸಜ್ಜಿತ ಕೊಠಡಿಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಒಳಗೊಂಡ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ಸಿದ್ಧಗೊಳಿಸಲಾಗುತ್ತಿದೆ.

ಕಲ್ಯಾಣ ಮಂಟಪ ಬ್ಲಾಕ್:

ಕಲ್ಯಾಣ ಮಂಟಪ ಬ್ಲಾಕ್ ಹಾಗೂ ವಿವಿಐಪಿ ಕೊಠಡಿಗಳ ಬ್ಲಾಕ್ 2025ರ ಏಪ್ರಿಲ್ ಅಥವಾ ಮೇ ಮಾಹೆಯಲ್ಲಿ ಸಂಪೂರ್ಣವಾಗಿ ಪೂರ್ಣಗೊಳ್ಳಲಿದ್ದು, ಸದರಿ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಸಿಎಂ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನೆರವೇರಿಸಲಾಗುವುದು.

ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ದೇವಾಲಯಗಳ ವಸತಿ ಕಾಯ್ದಿರಿಸುವಿಕೆಯ ವೆಬ್​ಸೈಟ್ Karnatakatemplesaccommodation.com ಮೂಲಕ ಶೇ.60% ರಷ್ಟು ಆನಗ ಲೈನ್ ಮೂಲಕ ಹಾಗೂ ಶೇ.40% ಆಫ್ ಲೈನ್ ಮೂಲಕ ಕೊಠಡಿಗಳನ್ನು ಹಂಚಿಕೆ ಮಾಡಿ ಅನುಕೂಲ ಮಾಡಿಕೊಡಲಾಗುತ್ತಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಕರ್ನಾಟಕದ ತಿರುಪತಿ ಭಕ್ತಿಗೆ ಸಿಹಿಸುದ್ದಿ: ತಿರುಮಲದಲ್ಲಿ 200 ಕೋಟಿ ವೆಚ್ಚದಲ್ಲಿ 3 ವಸತಿ ಸಂಕೀರ್ಣ ನಿರ್ಮಾಣ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ ಗೆ ಒಲಿದ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ! 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ ಕೆಜೆ ಜಾರ್ಜ್ Belagavi: ಮಕ್ಕಳು ಜಗಳ ಆಡುತ್ತವೆ ಅಂತ 7 ವರ್ಷದ ಬಾಲಕನ ಮಾರಿದ ಮಲತಂದೆ ಸೇರಿ ನಾಲ್ವರು ಬಂಧನ Mysore: ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ-ಮಗ ಅರೆಸ್ಟ್ ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ: ಸಚಿವ ಕೆಜೆ ಜಾರ್ಜ್ 34 ಎಸೆತದಲ್ಲಿ 79 ರನ್ ಚಚ್ಚಿದ ಅಭಿಷೇಕ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ ದೆಹಲಿ ಗಣರಾಜ್ಯೋತ್ಸವದಲ್ಲಿ ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಲಕ್ಕುಂಡಿ ಅನಾವರಣ! ಇ-ಸೇವೆಯಲ್ಲಿ ಕರ್ನಾಟಕ ನಂ.1: ರಾಷ್ಟ್ರೀಯ ಆಡಳಿತ ಸೇವಾ ಮೌಲ್ಯಮಾಪನ ವರದಿ BIG BREAKING ಪುಷ್ಪಕ್ ಎಕ್ಸ್ ಪ್ರೆಸ್ ನಲ್ಲಿ ಅಗ್ನಿ ದುರಂತ ವದಂತಿ: ಹಲವರ ಸಾವು