Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ತುಂಗಭದ್ರಾ ಜಲಾಶಯದಿಂದ 90 ದಿನ 4100 ಕ್ಯೂಸೆಕ್ ನೀರು ಹರಿಸಲು ನಿರ್ಧಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
tunga dam

ಬೆಂಗಳೂರು: ತುಂಗಭದ್ರಾ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರದ ಮೇಲೆ 90 ದಿನ‌‌ಗಳ ಕಾಲ 4100 ಕ್ಯೂಸೆಕ್ ನಂತೆ ಕಾಲುವೆಗಳಿಗೆ ಇಂದಿನಿಂದಲೇ ನೀರು ಹರಿಸಲು ತೀರ್ಮಾನಿಲಾಗಿದೆ ಎಂದು ಕೊಪ್ಪಳ‌‌ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಮುನಿರಾಬಾದ್ ನ ಟಿಬಿಪಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 126ನೇ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ 82 ಟಿಎಂಸಿ ನೀರಿನ ಸಂಗ್ರಹ ಇದ್ದು, ಮುಂದಿನ ದಿನಗಳಲ್ಲಿ‌‌ 16 ಟಿಎಂಸಿ‌ ನೀರು ಜಲಾಶಯಕ್ಕೆ ಹರಿದು ಬರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.‌ ಮುಂದಿನ‌ ತಿಂಗಳು ಸೆಪ್ಟೆಂಬರ್ ‌11ರಂದು ಮತ್ತೊಂದು ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗುವುದು ಎಂದು ತಿಳಿಸಿದರು.‌

ಜಲಾಶಯದಲ್ಲಿನ‌ ನೀರಿನ ಸಂಗ್ರಹ ಲಭ್ಯತೆಯ ಮೇರೆಗೆ ನೀರಿನ ಬಳಕೆ ಮಾಡಲಾಗುತ್ತಿದೆ. ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಆ. 11ರಿಂದ ನ.10 ರವರೆಗೆ 4100 ಕ್ಯೂಸೆಕ್ ನಂತೆ, ಬಲದಂಡೆ ಮೇಲ್ಮಟ್ಟದ  ಕಾಲುವೆಗೆ ಆ.11ರಿಂದ ನ.10ರವರೆಗೆ 1200 ಕ್ಯೂಸೆಕ್ ನಂತೆ ನೀರನ್ನು ಹರಿಸಲಾಗುವುದು.

ತುಂಗಭದ್ರಾ‌ ಬಲದಂಡೆ ಕೆಳಮಟ್ಟದ ಕಾಲುವೆಗೆ ಆ.11ರಿಂದ ನ.10ರವರೆಗೆ 650 ಕ್ಯೂಸೆಕ್ ನಂತೆ, ರಾಯ ಬಸವಣ್ಣ ಕಾಲುವೆಗೆ ಜ.1ರಿಂದ ಡಿ.10ರವರೆಗೆ ಸರಾಸರಿ 180 ಕ್ಯೂಸೆಕ್ ನಂತೆ ಹಾಗೂ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಆ.11ರಿಂದ ನ.10ರವರೆಗೆ 25 ಕ್ಯೂಸೆಕ್ ಮತ್ತು ನದಿಗೆ ಆ.11ರಿಂದ 17ರವರೆಗೆ 500 ಕ್ಯೂಸೆಕ್ ನೀರು ಹರಿಸಲಾಗುವುದು ಎಂದು ಮಾಹಿತಿ‌ ನೀಡಿದರು.

ತೆಲಂಗಾಣದ ಪಾಲು 3 ಟಿಎಂಸಿ, ಆಂಧ್ರದ ಪಾಲು 30 ಟಿಎಂಸಿ, ಡೆಡ್ ಸ್ಟೊರೇಜ್ ಎರಡು ಟಿಎಂಸಿ‌ ಹಾಗೂ ಕುಡಿಯುವ ನೀರಿಗೆ ಬೇಕಾದ ನೀರನ್ನು ಲೆಕ್ಕ ಹಾಕಿ ನಾಲ್ಕು ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರೈತರೊಂದಿಗೆ ಚರ್ಚೆ ನಡೆಸಿ‌ ಈ ಮೇಲಿನ‌ ನಿರ್ಧಾರ ಕೈಗೊಳ್ಳಲಾಗಿದೆ. ದೇವರ ಕೃಪೆಯಿಂದ ಮಳೆ‌ ಬಂದು ಜಲಾಶಯಕ್ಕೆ ನೀರು ಬರಲಿ‌ ಎಂದು ಪ್ರಾರ್ಥಿಸುತ್ತೇವೆ. ರೈತರ ಪರವಾಗಿ ನಮ್ಮ‌ ಸರ್ಕಾರ ಸದಾ ಇರಲಿದೆ‌ ಎಂದರು.‌

ಸಭೆಯಲ್ಲಿ ಸಚಿವ ನಾಗೇಂದ್ರ, ಮಾಜಿ ಸಚಿವ‌ ಬೋಸ್ ರಾಜ್, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ್,
ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಗಣೇಶ್, ಹಂಪನಗೌಡ ಬಾದರ್ಲಿ, ನಾಗರಾಜ್, ಬಸವನಗೌಡ ತುರುವಿಹಾಳ್, ಶಿವರಾಜ್ ಪಾಟೀಲ್, ಹಂಪಯ್ಯ ನಾಯಕ್, ಬಸನಗೌಡ ಬಾದರ್ಲಿ, ರೈತ ಮುಖಂಡರು ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment