Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ: ದಿನೇಶ್ ಗೂಳಿಗೌಡ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
MLA dinesh gooligowda
mla dinesh gooligowda

​ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಶಾಸಕ ದಿನೇಶ್ ಗೂಳಿಗೌಡ ಅವರು ಸ್ಪಷ್ಟಪಡಿಸಿದ್ದಾರೆ.

​ವಿರೋಧ ಪಕ್ಷದ ವರು ಗೃಹಲಕ್ಷ್ಮಿ ಯೋಜನೆ ಕುರಿತು ಇಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಜರೆದಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಸುಮಾರು 1 ಕೋಟಿ 24 ಲಕ್ಷಕ್ಕೂ ಅಧಿಕ ಮಹಿಳಾ ಯಜಮಾನಿಯರಿಗೆ ಪ್ರತಿ ತಿಂಗಳು ತಲಾ 2,000 ರೂಪಾಯಿಗಳಂತೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪುತ್ತಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಯೋಜನೆಯ ಫಲಾನುಭವಿಗಳಾಗಿದ್ದ ಸುಮಾರು 1 ಲಕ್ಷದ 95 ಸಾವಿರಕ್ಕೂ ಹೆಚ್ಚು ಕುಟುಂಬದ ಯಜಮಾನಿಯರು ಮರಣ ಹೊಂದಿದ್ದಾರೆ. ಆದಾಗ್ಯೂ, ತಾಂತ್ರಿಕ ಕಾರಣಗಳಿಂದಾಗಿ ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೂ ಇನ್ನೂ ಹಣ ಸಂದಾಯವಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿಯ ದುರುಪಯೋಗವನ್ನು ತಡೆಯುವ ಕೆಲಸವನ್ನು ಸರಕಾರದಿಂದ ಮಾಡಲಾಗುತ್ತಿದೆ ಎಂದು ಹೇಳಿದರು.

​ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ:

​”ಮೃತಪಟ್ಟವರ ಖಾತೆಗಳಿಗೆ ಸರ್ಕಾರದ ಹಣ ಪಾವತಿಯಾಗುತ್ತಿರುವುದನ್ನು ತಡೆಗಟ್ಟಲು ಮತ್ತು ಯೋಜನೆಯನ್ನು ಸದ್ವಿನಿಯೋಗಪಡಿಸಿಕೊಳ್ಳಲು ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರಿಗೆ ನಾನು ಈ ಹಿಂದೆ ಲಿಖಿತ ಮನವಿಯೊಂದನ್ನು ಸಲ್ಲಿಸಿ, ಫಲಾನುಭವಿಗಳಿಗೆ ‘ಜೀವಿತ ಪ್ರಮಾಣ ಪತ್ರ’ (Life Certificate) ಕಡ್ಡಾಯಗೊಳಿಸುವಂತೆ ಕೋರಿದ್ದೆ. ಅದೇ ರೀತಿ, ಪ್ರಸ್ತುತ ಮುಖ್ಯಮಂತ್ರಿಗಳಾಗಿರುವ ಡಿ.ಕೆ. ಶಿವಕುಮಾರ್ ಅವರಿಗೂ ಸಹ ಈ ಯೋಜನೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಮೃತಪಟ್ಟವರು ಹಾಗೂ ಅನರ್ಹರನ್ನು ಯೋಜನೆಯಿಂದ ಹೊರಗಿಡುವ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಸಂಪೂರ್ಣವಾಗಿ ಪರಿಷ್ಕರಣೆ ಮಾಡಬೇಕೆಂದು ಮನವಿ ಮಾಡಿದ್ದೇನೆ ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

​ಸರ್ಕಾರದ ಉದ್ದೇಶ ಸ್ಪಷ್ಟವಾಗಿದೆ:

​ಮುಖ್ಯಮಂತ್ರಿಗಳು ಈ ಮನವಿಯನ್ನು ಪುರಸ್ಕರಿಸಿ ಯೋಜನೆಯ ಪರಿಷ್ಕರಣೆಗೆ ಮುಂದಾಗಿದ್ದಾರೆ. ಈ ಪ್ರಕ್ರಿಯೆಯ ಮೂಲ ಉದ್ದೇಶ ಮೃತಪಟ್ಟ ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಸರ್ಕಾರದ ಹಣ ದುರುಪಯೋಗವಾಗುವುದನ್ನು ತಪ್ಪಿಸುವುದೇ ಆಗಿದೆ. ​ಯಾವುದೇ ಕಾರಣಕ್ಕೂ ಪ್ರಸ್ತುತ ಸೌಲಭ್ಯ ಪಡೆಯುತ್ತಿರುವ ಯಾವುದೇ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೆ ಈ ಯೋಜನೆಯಿಂದ ಯಾವುದೇ ರೀತಿಯ ತೊಂದರೆಯಾಗಲಿ ಅಥವಾ ನಷ್ಟವಾಗಲಿ ಸಂಭವಿಸುವುದಿಲ್ಲ. ವಿರೋಧ ಪಕ್ಷದವರು ರಾಜಕೀಯ ಪ್ರೇರಿತ ಅಪಪ್ರಚಾರಗಳನ್ನು ನಂಬಬಾರದು ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment