ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಾಲ್ಯ ವಿವಾಹ ಮಾತ್ರವಲ್ಲ ಬಾಲ್ಯ ವಿವಾಹದ ನಿಶ್ಚಿತಾರ್ಥದಲ್ಲಿ ಪಾಲ್ಗೊಂಡರೂ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ “ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ 2025ವನ್ನು ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಿದೆ.
ರಾಜ್ಯದಲ್ಲಿ ಬಾಲ್ಯ ವಿವಾಹ ನಿಷೇಧವಿದ್ದರೂ ಅವ್ಯವಹಾತವಾಗಿ ನಡೆಯುತ್ತಿದೆ. ಇದನ್ನು ಪರಿಣಕಾರಿ ತಡೆಗಟ್ಟಲು ಬಾಲ್ಯ ವಿವಾಹಕ್ಕೆ ಒತ್ತಾಯ ಹಾಕುವವರನ್ನೂ ಶಿಕ್ಷೆಗೆ ಗುರಿಪಡಿಸಲು ಮಸೂದೆಯಲ್ಲಿ ತಿದ್ದುಪಡಿ ತರಲಾಗುವುದು ಎಂದು ಸಭೆಯ ನಂತರ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ಬಾಲ್ಯ ವಿವಾಹಕ್ಕೆ ಬೆಂಬಲಿಸುವವರು, ಒತ್ತಾಯ ಹೇರುವವರು ಹಾಗೂ ನಿಶ್ಚಿತಾರ್ಥ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಅವರ್ನು ಕೂಡ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಅವರು ಹೇಳಿದರು.


