ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಒಂದೇ ಕುಟುಂಬದ 5 ಮಂದಿ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ಮುಂಜಾನೆ ಕೋಲಾರದಲ್ಲಿ ಸಂಭವಿಸಿದೆ.
ಯಮ್ಮಿಗನೂರು ಮಂಡಲದ ಕೋಟೆಕಲ್ ತಿರುವಿನ ಬಳಿ ಫಾರ್ಚೂನರ್ ಎಸ್‌ಯುವಿ ಮತ್ತು ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ವಿಫ್ಟ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಕುಟುಂಬದ ಸದಸ್ಯರು ಅಸುನೀಗಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆಯ ತಾಲ್ಲೂಕಿನ ಹುಲಿಬೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೊಸಹಳ್ಳಿ ಗ್ರಾಮದ ವೆಂಕಟೇಶಪ್ಪ (60), ಅವರ ಮಗಳು ಮೀನಾಕ್ಷಿ (32), ಅಳಿಯ ಸತೀಶ್ (36), ಮತ್ತು ಮೊಮ್ಮಕ್ಕಳಾದ ರುತ್ವಿಕ್‌ಗೌಡ (3) ಮತ್ತು ಭುವಿತ್‌ಗೌಡ (5) ಎಂದು ಗುರುತಿಸಲಾಗಿದೆ.
ಸ್ವಿಫ್ಟ್ ಡಿಜೈರ್‌ನಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದಾಗ ದುರಂತ ಸಂಭವಿಸಿದೆ.
ಫಾರ್ಚೂನರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಅಧೋನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವೀಪ್ಟ್ ಡಿಜೈರ್ ಕಾರ್‌ನಲ್ಲಿದ್ದ ಮೃತರಲ್ಲಿ ಮೂವರು ವಯಸ್ಕರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ.
ಅದೋನಿ ಕಡೆಗೆ ಹೋಗುತ್ತಿದ್ದ ಫಾರ್ಚೂನರ್ ಕಾರು ಅತಿ ವೇಗದಲ್ಲಿ ಚಲಿಸುತ್ತಿತ್ತು ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕರ್ನೂಲ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಬಸ್ ಅಪಘಾತದ ನಂತರ, ರಸ್ತೆ ಅಪಘಾತಗಳು ಪದೆ ಪದೇ ಸಂಭವಿಸುತ್ತಿವೆ, ಇದು ಪ್ರಯಾಣಿಕರಲ್ಲಿ ಭಯಭೀತರನ್ನುಂಟುಮಾಡಿದೆ.
ಹೆಚ್ಚಿನ ಜೀವಹಾನಿ ತಪ್ಪಿಸಲು ವಾಹನ ಚಾಲಕರು ವೇಗದ ಶಿಸ್ತನ್ನು ಕಾಪಾಡಿಕೊಳ್ಳಲು, ಸಂಚಾರ ನಿಯಮಗಳನ್ನು ಪಾಲಿಸಲು ಮತ್ತು ವಿಶೇಷವಾಗಿ ಅಪಾಯಕಾರಿ ತಿರುವುಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಲು ಪೊಲೀಸರು ಮನವಿ ಮಾಡಿದ್ದಾರೆ.


