Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಸೇವಾ ಸಿಂಧು ಪೋರ್ಟಲ್ ಮೂಲಕ ಇ-ಪಾಸ್ ವ್ಯವಸ್ಥೆ: ಡಾ.ಶಾಲಿನಿ ರಜನೀಶ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
shalini rajaneesh

ಬೆಂಗಳೂರು: ಬೆಂಗಳೂರು ನಗರದಲ್ಲಿ ಆಗಸ್ಟ್ 15 ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಥಮ ಬಾರಿಗೆ ಇ-ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ವೀಕ್ಷಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ www.sevasindhu.karnataka.gov.in ನಿಂದ ಇ-ಪಾಸ್ ಅನ್ನು ಪಡೆಯಲು ಸೇವಾ ಸಿಂಧು ವೆಬ್‍ಸೈಟ್‍ನಲ್ಲಿ ಆಧಾರ್ ಕಾರ್ಡ್ ವಿವರಗಳನ್ನು ನಮೂದಿಸಿ ನೋಂದಾಯಿಸಿಕೊಳ್ಳತಕ್ಕದ್ದು ಮತ್ತು ವೆಬ್‍ಸೈಟ್ ನಲ್ಲಿ ಲಾಗಿನ್ ಮಾಡಿ ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿದ ನಂತರ ಬರುವ ಒಟಿಪಿ ಅನ್ನು ಅಳವಡಿಸಿ ಇ-ಪಾಸ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.

ವಿಶೇಷ ಸೂಚನೆ:

ಇ-ಪಾಸ್ ಕೇವಲ ಆಗಸ್ಟ್ 15 ರಂದು ಮಾತ್ರ ಮಾನ್ಯವಾಗಿರುತ್ತದೆ. ಇ-ಪಾಸ್ ಹೊಂದಿರುವವರು ಬೆಳಿಗ್ಗೆ 08:15 ಗಂಟೆಗಿಂತ ಮೊದಲು ಗೇಟ್ ನಂ.4ರ ಬಳಿ ಆವರಣದ ಒಳಗೆ ಪ್ರವೇಶಿಸಬೇಕು. ಈ ಸಮಯದ ನಂತರ ಪ್ರವೇಶ ಅನುಮತಿಸಲಾಗುವುದಿಲ್ಲ ಹಾಗೂ ಇ-ಪಾಸ್ ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಪ್ರತಿ ಇ-ಪಾಸ್ ಕೇವಲ ಒಬ್ಬರಿಗೆ ಮಾತ್ರ ಪ್ರವೇಶಿಸಲು ಅನುಮತಿಸಿದೆ. ಕಾರ್ಯಕ್ರಮದ ಸಮಯದಲ್ಲಿ ಇ-ಪಾಸ್‍ನ ಮುದ್ರಿತ ಪ್ರತಿ ಅಥವಾ ಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಅವಶ್ಯವಿರುವುದಿಲ್ಲ. ಇ-ಪಾಸ್ ವರ್ಗಾಯಿಸುವಂತಿಲ್ಲ. ಇ-ಪಾಸ್‍ಗಳು ಒಟ್ಟು 3000 ಸಂಖ್ಯೆಗೆ ಸೀಮಿತವಾಗಿರುವುದರಿಂದ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಮೂಲ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು. ಇ-ಪಾಸ್ ಹೊಂದಿರುವವರಿಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ. ಪಾಕಿರ್ಂಗ್ ವ್ಯವಸ್ಥೆಗೆ ಪಾಸ್‍ಧಾರರೇ ಜವಾಬ್ದಾರರಾಗಿರುತ್ತಾರೆ ಎಂದು ಸಕಾರದ ಮುಖ್ಯ ಕಾರ್ಯದಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment