Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬೆಂಕಿ ಅನುಮಾನಕ್ಕೆ ಕಾರಣವಾದ ಕಾಡ್ಗಿಚ್ಚು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
charmadi ghat

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ದು, ಚಳಿಗಾಲದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನಿರಂತರ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದ್ದು, ಆತಂಕ ಉಂಟುಮಾಡಿದೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಕ್ಷಣದಿಂದ ಕ್ಷಣಕ್ಕೆ ಬೆಂಕಿಯ ಕೆನ್ನಾಲಿಗೆ ಹಬ್ಬುತ್ತಿದ್ದು,ನಂದಿಸುವ ಕಾರ್ಯ ಭರದಿಂದ ಸಾಗಿದೆ. ಗುಡ್ಡದಲ್ಲಿ ಬೀಸುತ್ತಿರುವ ಭಾರೀ ಗಾಳಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಚಾರ್ಮಡಿ ಘಾಟ್ ಸಮೀಪದ ಮಲಯ ಮಾರುತದ ಅರಣ್ಯ ಪ್ರದೇಶದಲ್ಲಿ ಬೆಂಕಿ ರಸ್ತೆಯಿಂದ 2 ಕಿ.ಮೀ. ದೂರದ ಅರಣ್ಯ ಪ್ರದೇಶದವರೆಗೂ ಹಬ್ಬಿದೆ. ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣವಾಗಿ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದೆ. ಚಾರ್ಮಡಿ ಘಾಟಿ ಅರಣ್ಯ ಪ್ರದೇಶದಲ್ಲಿನ ಬೆಂಕಿಯ ಬೆಳಗು ಮುಖ್ಯ ರಸ್ತೆಯವರೆಗೂ ಕಾಣುತ್ತಿದೆ.

ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಅತ್ಯಮೂಲ್ಯ ಗಿಡ ಮೂಲಿಕೆ ಸಸ್ಯಗಳು ಕೂಡ ಬೆಂಕಿಯಲ್ಲಿ ಬೆಂದು ಹೋಗಿವೆ. ನೂರಾರು ಪ್ರಾಣಿ-ಪಕ್ಷಿಗಳು ಸಾವನ್ನಪ್ಪಿವೆ.

ಅರಣ್ಯ ಅಧಿಕಾರಿಗಳು ಹೇಳುವ ಪ್ರಕಾರ, ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಲು ನಿಖರವಾದ ಕಾರಣ ತಿಳಿದು ಬಂದಿಲ್ಲ. ಚಾರ್ಮಡಿ ಗುಡ್ಡದ ಗಾಳಿಗೆ ಹರಡುತ್ತಿರುವ ಬೆಂಕಿಯ ಜ್ವಾಲೆ ಆತಂಕ ಮೂಡಿಸಿದ್ದು, ಈ ಕ್ಷಣದವರೆಗೂ ಕೂಡ ಬೆಂಕಿ ತನ್ನ ರೌದ್ರ ನರ್ತನ ಮುಂದುವರಿದಿದೆ.

ಕಾಡ್ಗಿಚ್ಚು ಸರ್ವೇ ಸಾಮಾನ್ಯ

ಪ್ರತಿ ಬೇಸಿಗೆ ಕಾಲದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಡಿ ಘಾಟ್ ಪ್ರದೇಶದಲ್ಲಿ ಹಾಗೂ ಮುಳ್ಳಯ್ಯನಗಿರಿ ಪ್ರದೇಶ ಮತ್ತು ಚುರ್ಚೆ ಗುಡ್ಡ ಹಾಗೂ ಇತರೇ ಪ್ರದೇಶದಲ್ಲಿ ಬೆಂಕಿಯ ಕಾಡ್ಗಿಚ್ಚು ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯವಾಗಿತ್ತು.

ಆದರೆ ಮೂಡಿಗೆರೆ ತಾಲೂಕಿನಲ್ಲಿ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಕಾಡ್ಗಿಚ್ಚು ಬೀಳುತ್ತಿತ್ತು. ಅದು ಈ ವರ್ಷದ ಪ್ರಾರಂಭದಲ್ಲೇ ಮತ್ತೊಮ್ಮೆ ಸಾಬೀತು ಆಗಿದ್ದು, ಅತ್ಯಂತ ದೊಡ್ಡ ಪ್ರಮಾಣದಲ್ಲಿ ಬೆಂಕಿ ಬಿದ್ದಿದೆ.

ಚಳಿಗಾಲದಲ್ಲಿ ಕಾಡ್ಗಿಚ್ಚು ಹಬ್ಬಿರುವುದು ನಾನಾ ಅನುಮಾನಗಳಿಗೆ ಕಾರಣವಾಗಿದೆ. ಉದ್ದೇಶಪೂರ್ವಕವಾಗಿ ಯಾರಾದರೂ ಅರಣ್ಯಕ್ಕೆ ಬೆಂಕಿ ಇಟ್ಟಿದ್ದಾರೆಯೇ ಅಥವಾ ಬಿದಿರುಗಳ ಮಧ್ಯೆ ಸಂಘರ್ಷ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆಯೇ ಎಂಬ ಸಂಶಯ ಮೂಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment