Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಜಾಮೀನು ಕೋರಿ ಮಾಜಿ‌ ಸಂಸದ ಪ್ರಜ್ವಲ್ ಹೈಕೋರ್ಟ್​ಗೆ ಅರ್ಜಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
prajwal revanna
prajwal revanna

ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಸಂತ್ರಸ್ತ ಮಹಿಳೆಯನ್ನು ಪ್ರತಿವಾದಿಯನ್ನಾಗಿಸದ ಅಂಶವನ್ನು ಗಮನಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಸಂತ್ರಸ್ತೆಯನ್ನು ಪ್ರತಿವಾದಿಯನ್ನಾಗಿ ಮಾಡಬೇಕು. ಅವರ ವಾದ ಆಲಿಸಬೇಕಾಗಿದೆ ಎಂದು ಸೂಚನೆ ನೀಡಿ, ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಹೊಳೆನರಸೀಪುರದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ್ದ ಪೊಲೀಸರು, 2,144 ಪುಟಗಳ ಹಾಗೂ 150 ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಆರೋಪಿ ಪ್ರಜ್ವಲ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಂತ್ರಸ್ತೆಯ (ಮನೆ ಕೆಲಸದಾಕೆ) ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದನ್ನು ತನ್ನ ಮೊಬೈಲ್​​​ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಅಲ್ಲದೇ ಕೆಲಸದಾಕೆಯ ಮಗಳಿಗೆ ವಿಡಿಯೋ ಕರೆ ಮಾಡಿ ವಿವಸ್ತ್ರಳಾಗುವಂತೆ ಒತ್ತಾಯಿಸಿ, ಅದರ ಸ್ಕ್ರೀನ್ ಶಾಟ್​ಗಳನ್ನು ತೆಗೆದುಕೊಂಡಿದ್ದಾರೆ ಎಂಬುದಾಗಿ ತನಿಖಾಧಾರಿಗಳು ಆರೋಪ ಪಟ್ಟಿಯಲ್ಲಿ ವಿವರಿಸಿದ್ದರು.

ಪ್ರಕರಣ ಸಂಬಂಧ ಆರೋಪ ಪಟ್ಟಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರಜ್ವಲ್​ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment