Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಅಣ್ಣ-ತಮ್ಮ ಸೇರಿ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಸಾವು: 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು

ಚಿಕ್ಕಬಳ್ಳಾಪುರ: ಟಿಪ್ಪರ್​ ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅಣ್ಣ-ತಮ್ಮ ಸೇರಿದಂತೆ ಒಂದೇ ಗ್ರಾಮದ ನಾಲ್ವರು ಮೃತಪಟ್ಟ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಜ್ಜವಾರ ಗ್ರಾಮದ ನಿವಾಸಿಗಳಾದ ನರಸಿಂಹಮೂರ್ತಿ (27), ನಂದೀಶ್ (25), ಅರುಣ್ (18), ಮನೋಜ್ (19) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನರಸಿಂಹಮೂರ್ತಿ ಮತ್ತು ನಂದೀಶ್ ಸಹೋದರರಾಗಿದ್ದಾರೆ. ಒಂದೇ ಬೈಕ್​​ನಲ್ಲಿ ನಾಲ್ವರು ಯುವಕರು ಚಿಕ್ಕಬಳ್ಳಾಪುರದಿಂದ ಅಜ್ಜವಾರ ಗ್ರಾಮಕ್ಕೆ ಬರುತ್ತಿದ್ದರು, ಈ ವೇಳೆ ಶಿಡ್ಲಘಟ್ಟದಿಂದ ಚಿಕ್ಕಬಳ್ಳಾಪುರದತ್ತ ಟಿಪ್ಪರ್ ಬರುತ್ತಿತ್ತು. ಆಗ ಬೈಕ್ ಮತ್ತು ಟಿಪ್ಪರ್ ಮಧ್ಯೆ ಡಿಕ್ಕಿ ಸಂಭವಿಸಿದೆ.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೃತ ನಾಲ್ವರು ಒಂದೇ ಗ್ರಾಮದವರಾಗಿದ್ದು, ಒಂದೇ ಬೈಕ್​ನಲ್ಲಿ ಸಂಚರಿಸುತ್ತಿದ್ದರು. ಈ ನಾಲ್ವರಲ್ಲಿ ನಂದೀಶ್ ಮತ್ತು ನರಸಿಂಹನೂರ್ತಿ ಸಹೋದರರಿದ್ದಾರೆ ಎಂದರು.

ನಾಲ್ವರು ಯುವಕರನ್ನು ಕಳೆದುಕೊಂಡ ಪೋಷಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

5 ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ

ಅಜ್ಜಾವರ ಗ್ರಾಮದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಕ ವ್ಯಕ್ತಪಡಿಸಿದ್ದಾರೆ.  ಮನೆಗೆ ಆಧಾರ ಸ್ತಂಭವಾಗಿದ್ದ ಮನೆಯ ಮಕ್ಕಳ ಸಾವಿನಿಂದ ಕ್ರಿಸ್ ಮಸ್ ಸಂಭ್ರಮದ ವೇಳೆ ಮನೆಯಲ್ಲಿ ಸೂತಕ ಆಗಿರುವುದು ಬೇಸರ ಮೂಡಿಸಿದೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment