Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಆಗಸ್ಟ್ 4ರಿಂದ ಗಜಪಯಣ: ಅಂಬಾರಿ ಹೊರಲಿರುವ ಅಭಿಮನ್ಯು 9 ಆನೆಗಳ ಮೊದಲ ಪಟ್ಟಿ ಬಿಡುಗಡೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 35 ವೀಕ್ಷಣೆಗಳು
dasara abhimanyu

ಬೆಂಗಳೂರು: ಈ ಬಾರಿಯೂ ಅಭಿಮನ್ಯು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು 2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಅವರು, 2020ರಿಂದ ವಿಜಯ ದಶಮಿಯ ದಿನದಂದು ಜಂಬೂಸವಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ವಿಗ್ರಹವಿರುವ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯುವೇ ಕ್ಯಾಪ್ಟನ್ ಆಗಲಿದ್ದಾನೆ ಎಂದು ತಿಳಿಸಿದರು.

ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷ ವಯಸ್ಸಿನ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತನಾಗಿದ್ದಾನೆ.

ಈ ಬಾರಿಯ ಜಂಬೂಸವಾರಿಯಲ್ಲಿ ಮತ್ತೀಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು  ಪ್ರಶಾಂತ್ (53), ಬಳ್ಳೆ ಶಿಬಿರದ  ಮಹೇಂದ್ರ (42), ದೊಡ್ಡಹರವೆ ಶಿಬಿರದ  ಏಕಲವ್ಯ (40) ಗಂಡಾನೆಗಳು ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ ಲಕ್ಷ್ಮೀ (53) ಹೆಣ್ಣಾನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ ಎಂದು ತಿಳಿಸಿದರು.

ಎರಡನೇ ಹಂತದಲ್ಲಿ 5 ಆನೆಗಳನ್ನು ಕಾಡಿನಿಂದ ಮೈಸೂರಿಗೆ ತರಲಾಗುವುದು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳಿಗೆ ಆ.4ರಂದು ನಡೆಯುವ ಗಜಪಯಣದಲ್ಲಿ ವಿಧ್ಯುಕ್ತವಾಗಿ ಮತ್ತು ಸಾಂಪ್ರದಾಯಿಕವಾಗಿ ಬೀಳ್ಕೊಡಲಾಗುವುದು ಎಂದು ತಿಳಿಸಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ.ರೇ ಉನ್ನತಾಧಿಕಾರಿಗಳಾದ ಮಹೇಶ್ ಶಿರೂರ್, ಮನೋಜ್ ಕುಮಾರ್, ಮಾಲತಿ, ಪ್ರಭುಗೌಡ ಬಿರಾದಾರ್ ಪಾಲ್ಗೊಂಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment