Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಪೌರಕಾರ್ಮಿಕರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 6 ಸಾವಿರಕ್ಕೂ ಹೆಚ್ಚು ಗೃಹಭಾಗ್ಯ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
byrati suresh

ಸುವರ್ಣಸೌಧ: ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಗುರುವಾರ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಇ-ಖಾತಾ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅವರು ಈ ವಿಷಯ ತಿಳಿಸಿದರು.

ಈ ಗೃಹಭಾಗ್ಯ ಯೋಜನೆಗೆ ಒಟ್ಟು 6119 ಫಲಾನುಭವಿಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ 326 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಇದುವರೆಗೆ 4159 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ 172 ಮತ್ತು ವಿಜಯಪುರದಲ್ಲಿ 133 ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಪೌರಕಾರ್ಮಿಕರ ವಿಶೇಷ ನೇಮಕಾತಿ

ಪೌರಕಾರ್ಮಿಕರ ಹೊರಗುತ್ತಿಗೆ ಪದ್ಧತಿಯನ್ನು 2017 ರಲ್ಲಿ ಸ್ಥಗಿತಗೊಳಿಸಿ, ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದವರಿಗೆ ವಿಶೇಷ ನೇಮಕಾತಿಯಡಿ ಅವಕಾಶ ನೀಡಲಾಗುತ್ತಿದೆ. ವಿವಿಧ ಹಂತಗಳಲ್ಲಿ ಸಾವಿರಾರು ಪೌರಕಾರ್ಮಿಕರ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 127 ಮತ್ತು ವಿಜಯಪುರದಲ್ಲಿ 66 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಿರುವುದು ಸಂತಸದ ವಿಚಾರ. ಇನ್ನೂ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದ ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗಣಿಕೀಕೃತ ಖಾತಾ ನೀಡುವ ಉದ್ದೇಶದಿಂದ 2016 ರಿಂದ ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. 2019 ರಿಂದ ಮಹಾನಗರಪಾಲಿಕೆಗಳಲ್ಲಿ ಇದನ್ನು ಕಡ್ಡಾಯಗೊಳಿಸಲಾಗಿದೆ. ಇದುವರೆಗೆ ರಾಜ್ಯಾದ್ಯಂತ ಸುಮಾರು 29 ಲಕ್ಷ ಇ-ಖಾತಾಗಳನ್ನು ಸೃಜಿಸಲಾಗಿದೆ. ಇದರಲ್ಲಿ 25,03,385 ಎ-ಖಾತಾ ಮತ್ತು 4,39,889 ಬಿ-ಖಾತಾಗಳು ಸೇರಿವೆ ಎಂದರು.

ಅಧಿಕೃತ ಆಸ್ತಿಗಳ ಜೊತೆಗೆ, ಕಂದಾಯ ಭೂಮಿ ಮತ್ತು ಅನುಮೋದನೆಯಾಗದ ಬಡಾವಣೆಗಳಲ್ಲಿನ ಆಸ್ತಿಗಳಿಗೂ ಇ-ಖಾತಾ ನೀಡಲು ಕಾಯ್ದೆಗೆ ತಿದ್ದುಪಡಿ ತಂದು ಬಿ-ಖಾತಾ ನೀಡಲು ಅವಕಾಶ ಕಲ್ಪಿಸಲಾಗಿದೆ. ದಿನಾಂಕ 10-09-2024ರ ಪೂರ್ವದಲ್ಲಿ ನೋಂದಣಿಯಾದ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಅವಕಾಶವಿದೆ.

ನಾಗರಿಕರು ತಮ್ಮ ಆಸ್ತಿ ವಿವರಗಳನ್ನು ಆನ್ಲೈನ್ನಲ್ಲಿ ವೀಕ್ಷಿಸಿ, ವಿವರಗಳು ಸರಿಯಿದ್ದರೆ ನೇರವಾಗಿ ಅಂತಿಮ ಇ-ಖಾತೆಯನ್ನು ಪಡೆಯಬಹುದು. ವ್ಯತ್ಯಾಸಗಳಿದ್ದಲ್ಲಿ ಆನ್ಲೈನ್ ಮೂಲಕವೇ ಮಾಹಿತಿ ಸಲ್ಲಿಸಿ ಸರಿಪಡಿಸಿಕೊಳ್ಳಬಹುದು. ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಲಿದ್ದು, ಕಚೇರಿಗಳಿಗೆ ಅಲೆಯುವ ಅವಶ್ಯಕತೆ ಇರುವುದಿಲ್ಲ ಎಂದು ಬೈರತಿ ಸುರೇಶ್ ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment