Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ತಂಬಾಕು ಬೆಳೆಗಾರರಿಗೆ ಸಿಹಿಸುದ್ದಿ: ಶೇ.18ರಷ್ಟು ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 32 ವೀಕ್ಷಣೆಗಳು
tobacco

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲವಾಗಿ ಎಫ್‌ʼಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರಕಾರ ತೆಗೆದು ಹಾಕಿದೆ.

ಈ ತಂಬಾಕಿನ ಮೇಲೆ ಶೇಕಡ 18ರಷ್ಟು ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ದೂರವೇ ಉಳಿದಿದ್ದರು. ಇದರಿಂದ ಬೆಳೆದ ಬೆಳೆ ಮಾರಾಟವಾಗದೆ ರಾಜ್ಯದ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ. ಕೋಟೆ, ಅರಕಲಗೂಡು ಸೇರಿದಂತೆ ವಿವಿಧ ಭಾಗಗಳಲ್ಲಿನ ತಂಬಾಕು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು.

ಬೆಳೆಗಾರರು ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತಮ್ಮ ಸಂಕಷ್ಟ ತೋಡಿಕೊಂಡಿದ್ದರು. ಈ ಸಂಬಂಧ ಸಚಿವರು ಬೆಂಗಳೂರಿನ ತಂಬಾಕು ಮಂಡಳಿ ವ್ಯಸ್ಥಾಪಕ ನಿರ್ದೇಶಕರು ಮತ್ತು ವಿಶಾಖಪಟ್ಟಣ ವಿಭಾಗದ ಕೇಂದ್ರೀಯ ಅಬಕಾರಿ ಮತ್ತು ಜಿಎಸ್ಟಿ ಮುಖ್ಯ ಆಯುಕ್ತರ ಜತೆ ನಡೆಸಲಾಗಿದ್ದ ಪತ್ರ ವ್ಯವಹಾರಗಳ ಕುರಿತ ಎಲ್ಲಾ ಮಾಹಿತಿಯನ್ನೂ ಪಡೆದುಕೊಂಡಿದ್ದರು.

ನಂತರ ಸಚಿವರು ಈ ವಿಷಯವನ್ನು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರ ಗಮನಕ್ಕೆ ತಂದು, ತಂಬಾಕು ಮೇಲಿನ ಅಬಕಾರಿ ಸುಂಕವನ್ನು ರದ್ದು ಮಾಡಬೇಕು ಎಂದು ವಿನಂತಿಸಿದ್ದರು.

ಸಚಿವ ಕುಮಾರಸ್ವಾಮಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿರುವ ವಿತ್ತ ಸಚಿವರು, ತಂಬಾಕು ಮೇಲಿನ ಅಬಕಾರಿ ಸುಂಕ ವಿನಾಯಿತಿ ನಿರ್ಧಾರವನ್ನು ಕೈಗೊಂಡಿದ್ದಾರೆ.

ಈ ಸಂಬಂಧ ಫೆಬ್ರವರಿ 1ರಂದು ಆದೇಶ ಹೊರಡಿಸಿರುವ ತಂಬಾಕು ಮಂಡಳಿಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಬಕಾರಿ ಸುಂಕವನ್ನು ಹಿಂಪಡೆಯಲಾಗಿದೆ ಹಾಗೂ ಫೆಬ್ರವರಿ 5ರಿಂದಲೇ ಹರಾಜು ಪ್ರಕ್ರಿಯೆ ಆರಂಭ ಮಾಡುವಂತೆ ನಿರ್ದೇಶನ ನೀಡಿದೆ.

ವಿತ್ತ ಸಚಿವರಿಗೆ ಹೆಚ್ದಿಕೆ ಧನ್ಯವಾದ

ತಂಬಾಕು ಹರಾಜು ವಿಷಯಕ್ಕೆ ಸಂಬಂಧಿಸಿ ತಮ್ಮ ಮನವಿಗೆ ಸ್ಪಂದಿಸಿ ಬೆಳೆಗಾರರ ಪರವಾಗಿ ಕ್ರಮ ವಹಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಸಚಿವ ಕುಮಾರಸ್ವಾಮಿ ಅವರು ಧನ್ಯವಾದ ತಿಳಿಸಿದ್ದಾರೆ. ತಮ್ಮ ನಿರ್ಧಾರದಿಂದ ತಂಬಾಕು ಬೆಳೆಗಾರರರಿಗೆ ದೊಡ್ಡ ಮಟ್ಟದಲ್ಲಿ ಸಹಾಯವಾಗಲಿದೆ ಎಂದು ಅವರು ವಿತ್ತ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಸಂಬಂಧ ನನ್ನೊಂದಿಗೆ ಮಾಜಿ ಮಂತ್ರಿಗಳಾದ ಸಾ.ರಾ. ಮಹೇಶ್, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ, ಅರಕಲಗೂಡು ಶಾಸಕ ಎ. ಮಂಜು, ಪಿರಿಯಾಪಟ್ಟಣ ಮಾಜಿ ಶಾಸಕ ಮಹದೇವು ಹಾಗೂ ಹೆಚ್.ಡಿ. ಕೋಟೆಯ ಜೆಡಿಎಸ್‌ ಪಕ್ಷದ ಹಿರಿಯ ಮುಖಂಡ ಕೃಷ್ಣ ನಾಯಕ್‌ ಮುಂತಾದವರು ನನ್ನೊಂದಿಗೆ ಚರ್ಚೆ ನಡೆಸಿದ್ದರು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಏನಿದರ ಹಿನ್ನೆಲೆ?

ತಂಬಾಕು ಮೇಲೆ ಅಬಕಾರಿ ಸುಂಕ ಮತ್ತು ಜಿಎಸ್‌ಟಿ ದರ ಏರಿಕೆ ವಿರೋಧಿಸಿ ತಂಬಾಕು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರಲು ಖರೀದಿ ಕಂಪನಿಗಳು ನಿರ್ಧರಿಸಿದ್ದವು. ಇದರಿಂದ ಹರಾಜು ಪ್ರಕ್ರಿಯೆ ಸ್ಥಗಿತಗೊಂಡು ಮಾರುಕಟ್ಟೆ ಬಂದ್ ಆಗಿದ್ದವು. ರೈತರು ತೀವ್ರ ಸಂಕಷ್ಟಕ್ಕೆ ತುತ್ತಾಗಿದ್ದರು.

ಖರೀದಿ ಕಂಪನಿಗಳು ತಮ್ಮ ಮೇಲೆ ವಿಧಿಸಿರುವ ಅನುತ್ಪಾದಕ ತಂಬಾಕಿಗೆ ಅಬಕಾರಿ ಸುಂಕ ಹಾಗೂ ತಂಬಾಕು ಉತ್ಪನ್ನಗಳಿಗೆ ಜಿಎಸ್‌ಟಿ ಏರಿಕೆಯ ಹಿನ್ನಲೆಯಲ್ಲಿ ತಂಬಾಕು ಖರೀದಿ ಕಂಪನಿಗಳು ತಾತ್ಕಾಲಿಕವಾಗಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿವೆ. ಇದರಿಂದಾಗಿ ಮಾರುಕಟ್ಟೆ ಬಂದ್ ಆಗಿದ್ದು, ರೈತರು ಕಷ್ಟಪಟ್ಟು ಬೆಳೆದ ತಂಬಾಕು ಒಣಗುತ್ತಿದೆ. ದಿನದಿನಕ್ಕೂ ಬೆಲೆ ಈಲಿಮುಖವಾಗುತ್ತುದೆ. ಈ ನಡುವೆ ಹರಾಜು ಪ್ರಕ್ರಿಯೆಯಲ್ಲಿ ತಾತ್ಕಾಲಿಕವಾಗಿ ಭಾಗವಹಿಸುವುದಿಲ್ಲವೆಂದು ಖರೀದಿದಾರರು ಘೋಷಿಸಿದ್ದರು. ಬೆಳೆಗಾರರು ತೊಂದರೆ ಅನುಭವಿಸಬಾರದು ಎನ್ನುವ ಕಾರಣಕ್ಕೆ ಸಚಿವ ಕುಮಾರಸ್ವಾಮಿ ಅವರು ಮಧ್ಯ ಪ್ರವೇಶಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment