Thursday, December 25, 2025
Google search engine
Homeರಾಜ್ಯಸರ್ಕಾರಿ ನೌಕರರಿಗೆ ಸಂಕಷ್ಟ: ಜಾತಿ ಗಣತಿಗೆ ಗೈರು ಹಾಜರಾದವರ ವಿರುದ್ಧ ಶಿಸ್ತು ಕ್ರಮಕ್ಕೆ ಸಚಿವ ಸಂಪುಟ...

ಸರ್ಕಾರಿ ನೌಕರರಿಗೆ ಸಂಕಷ್ಟ: ಜಾತಿ ಗಣತಿಗೆ ಗೈರು ಹಾಜರಾದವರ ವಿರುದ್ಧ ಶಿಸ್ತು ಕ್ರಮಕ್ಕೆ ಸಚಿವ ಸಂಪುಟ ತೀರ್ಮಾನ

ಜಾತಿಗಣತಿ ಸಮೀಕ್ಷೆಗೆ ಗೈರು ಹಾಜರಾದ ಅಧಿಕಾರಿ/ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿ/ನೌಕರರು ಹಾಜರಾಗದೇ ಅಥವಾ ಕರ್ತವ್ಯಗಳನ್ನು ನಿರ್ವಹಿಸದೇ ಇದ್ದಲ್ಲಿ ಅಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ಪ್ರಾಯೋಜಿಸಲಾಗಿದೆ.

ಸಂಪುಟ ಸಭೆಯ ನಂತರ ಸಚಿವ ಎಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಸೆ.27 ರಂದು ಮುಂಜಾನೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿ‍ರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಲಿದ್ದಾರೆ ಎಂದರು.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಗಣತಿದಾರರಾಗಿ ನಿಯೋಜಿಸಲ್ಪಡುವ ಸರ್ಕಾರ, ನಿಗಮ/ಮಂಡಳಿಗಳ ಅಧಿಕಾರಿ/ ನೌಕರರುಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021ರಡಿ ಹಾಗೂ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರನ್ವಯ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments