ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಲಸದ ಒತ್ತಡದಿಂದ ತುಂಬಾ ದಣಿದಿದ್ದರಿಂದ ಅನಾರೋಗ್ಯ ಕಂಡುಬಂದಿದ್ದು, ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಅವರು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಮೂರು-ನಾಲ್ಕು ದಿನಗಳ ಕಾಲ ಚಿಕಿತ್ಸೆ ಪಡೆದು ಚೇತರಿಸಿಕೊಂಡ ನಂತರ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ.
ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸುವ ಅವರು ಬಿಡುವಿಲ್ಲದೆ ವಿವಿಧ ರಾಜ್ಯಗಳಿಗೆ ಪ್ರವಾಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಅವರ ದೇಹ ತುಂಬಾ ದಣಿದು ಕೆಲಸದ ಒತ್ತಡದಿಂದ ಆರೋಗ್ಯ ಹದಗೆಟ್ಟಿತ್ತು.
ಸದ್ಯ ಅಪೋಲೋ ಆಸ್ಪತ್ರೆಯ ವೈದ್ಯರಿಂದ ಅವರು ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಅನಾರೋಗ್ಯ ಕಂಡುಬಂದ ಹಿನ್ನೆಲೆ ಹೆಚ್‌ಡಿ ಕುಮಾರಸ್ವಾಮಿ ಅವರ ಕಾರ್ಯಕ್ರಮಗಳು ಕೂಡ ರದ್ದಾಗಿವೆ.


