Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಹಾಸನ: ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 18 ವೀಕ್ಷಣೆಗಳು
hassan new

ಹಾಸನ: ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.

ನಂಬಿಹಳ್ಳಿಯ ಗೋಪಾಲ್ (27) ಮತ್ತು ಪತ್ನಿ ದೀಪು (24) ಎಂದು ಮೃತಪಟ್ಟಿದ್ದಾರೆ. ಇವರಿಬ್ಬರು ಮಧ್ಯಾಹ್ನ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು.

ಬಟ್ಟೆ ತೊಳೆಯುವಾಗ ದೀಪು ಕಾಲು ಜಾರಿ ನಾಲೆಗೆ ಬಿದ್ದಿದ್ದು, ಆಕೆಯನ್ನು ರಕ್ಷಿಸಲು ಪತಿ ಗೋಪಾಲ್ ನಾಲೆಗೆ ಇಳಿದಿದ್ದಾರೆ. ನಾಲೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದರಿಂದ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮುಳುಗಿ ಸಾವನ್ನಪ್ಪಿದ್ದಾರೆ.

ದಂಪತಿ ಮನೆಗೆ ಬಾರದಿದ್ದರಿಂದ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿ ನಂತರ ನಾಲೆ ಬಳಿ ನೋಡಿದಾಗ ಬಟ್ಟೆಗಳು ದಡದಲ್ಲಿತ್ತು.

ಕೂಡಲೇ ಕುಟುಂಬಸ್ಥರು ಚನ್ನರಾಯಪಟ್ಟಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೋಮವಾರ ಅಗ್ನಿಶಾಮಕದಳ ಸಿಬ್ಬಂದಿ ನಾಲೆಯಲ್ಲಿ ಶೋಧಕಾರ್ಯ ನಡೆಸಿದ ವೇಳೆ ಪತಿ ಗೋಪಾಲ್ ಮೃತದೇಹ ನಾಲೆಯಲ್ಲಿ ಪತ್ತೆಯಾಗಿದೆ.

ಪತ್ನಿ ದೀಪು ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ.ಈ‌ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment